ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ - ಎಲ್ಲೆಡೆ ಶಾಂತಿಯುತ ಮತದಾನ.. ಡಿಸಿ

ಉಡುಪಿ : ಇಂದು ದಕ್ಷಿಣ ಕನ್ನಡ ಜಿಲ್ಲಾ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ ನಡೆಯುತ್ತಿದೆ. ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾದ ಬಳಿಕ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಿಗದಿಯಾಗಿದೆ. ಉಡುಪಿ ಜಿಲ್ಲೆಯಲ್ಲಿ 328 ಪೊಲೀಸ್ ಅಧಿಕಾರಿಗಳು ಹಾಗೂ ಮತಕಟ್ಟೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 2480 ಮತದಾರರು ಇದ್ದಾರೆ.

ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಮತಗಟ್ಟೆಗಳಿಗೆ ತೆರಳಿ ಪರಿಶೀಲನೆ ನಡೆಸಿದರು.ಬಳಿಕ ಮಾತನಾಡಿದ ಅವರು ಇಂದು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಮತದಾನದಲ್ಲಿ ಭಾಗವಹಿಸಿದ್ದಾರೆ.ಎಲ್ಲ ಕಡೆ ಮತದಾನ ಶಾಂತಿಯುವತಾಗಿ ನಡೆಯುತ್ತಿದೆ.ಸಂಜೆ ನಾಲ್ಕು ಗಂಟೆತನಕ ಮತದಾನ ನಡೆಯುತ್ತಿದ್ದು ಅರ್ಹ ಮತದಾರರೆಲ್ಲರೂ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ವಿನಂತಿ ಮಾಡಿದ್ದಾರೆ.

Edited By : Vinayak Patil
PublicNext

PublicNext

21/10/2024 04:02 pm

Cinque Terre

18.62 K

Cinque Terre

0

ಸಂಬಂಧಿತ ಸುದ್ದಿ