ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : 'ಶರಾವತಿ ನದಿ ನೀರು ಬೆಂಗಳೂರಿಗೆ - ಯೋಜನೆ ವಿಚಾರದಲ್ಲಿ ಯಾವುದೇ ಹೋರಾಟಗಳು ಸಜ್ಜುಗೊಳ್ಳುವ ಅವಶ್ಯಕತೆ ಇಲ್ಲ' - ಬೇಳೂರು

ಶಿವಮೊಗ್ಗ : ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ತೆಗೆದುಕೊಂಡು ಹೋಗುವ ಯೋಜನೆಯ ಪ್ರಸ್ತಾಪ ಸದ್ಯಕ್ಕಿಲ್ಲ, ಸರ್ಕಾರವಾಗಲಿ, ತಾವಾಗಲಿ ಇದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸ್ಪಷ್ಟಪಡಿಸಿದ್ದಾರೆ.

ಇಂದು ಪತ್ರಿಕಾಗೋಷ್ಟಿ ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಯೋಜನೆಯ ಪ್ರಸ್ತಾಪ ಮಲೆನಾಡಿನಲ್ಲಿ ಸಾಕಷ್ಟು ಸುದ್ದಿ ಆಗಿದೆ. ಅನೇಕ ಮಂದಿ ಪರಿಸರವಾದಿಗಳು, ಹೋರಾಟಗಾರರು ವಿರೋಧಿಸಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಶರಾವತಿ ನದಿಯ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ. ಈ ಬಗ್ಗೆ ಯಾವುದೇ ಆತಂಕಬೇಡ ಎಂದು ತಿಳಿಸಿದ್ದಾರೆ.

ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ತೆಗೆದುಕೊಂಡು ಹೋಗುವ ಯೋಜನೆ ನಮ್ಮ ಸರ್ಕಾರದ್ದಲ್ಲ. ಈ ಹಿಂದೆ ಬೊಮ್ಮಾಯಿ ಸರ್ಕಾರ ಇದ್ದಾಗ ಈ ಯೋಜನೆಯ ಪ್ರಸ್ತಾಪ ಮಾಡಲಾಗಿತ್ತು. ನಮ್ಮ ಸರ್ಕಾರ ಬಂದಾಗ ಈ ಯೋಜನೆಯ ಸಾಧ್ಯಾಸಾಧ್ಯತೆಗಳ ಬಗ್ಗೆ ವರದಿ ಕೇಳಿತ್ತು. ಆಗ ಇದು 20 ಸಾವಿರ ಕೋಟಿ ರೂ. ಯೋಜನೆ ಎಂಬುದು ಬೆಳಕಿಗೆ ಬಂತು.

ಹಾಗೆಯೇ ನಾನು ಕೂಡ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಇದು ಅಸಾಧ್ಯದ ಯೋಜನೆ. ಇದು ಕಾರ್ಯ ಸಾಧುವಲ್ಲ, ಇದನ್ನು ಜಾರಿಗೆ ತರಬಾರದು ಎಂದು ಮನವಿ ಮಾಡಿದ್ದೇನೆ. ಈ ಕಾರಣದಿಂದಲೇ ಸರ್ಕಾರ ಈ ಯೋಜನೆಯನ್ನು ಸದ್ಯಕ್ಕೆ ಕೈ ಬಿಟ್ಟಿದೆ ಎಂದಿದ್ದಾರೆ. ಈಗ ಈ ಯೋಜನೆಯ ವಿಚಾರದಲ್ಲಿ ಯಾವುದೇ ಹೋರಾಟಗಳು ಸಜ್ಜುಗೊಳ್ಳುವ ಅವಶ್ಯಕತೆ ಇಲ್ಲ. ಸರ್ಕಾರದ ಮುಂದೆ ಈ ಯೋಜನೆಯ ಪ್ರಸ್ತಾಪ ಇಲ್ಲ ಎಂದು ಮನವಿ ಮಾಡಿಕೊಂಡಿದ್ದಾರೆ.

Edited By : Vinayak Patil
PublicNext

PublicNext

21/10/2024 04:14 pm

Cinque Terre

14.2 K

Cinque Terre

0

ಸಂಬಂಧಿತ ಸುದ್ದಿ