ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪೊಲೀಸ್ ಹುತಾತ್ಮರ ದಿನಾಚರಣೆ - ಗೌರವ ಸಲ್ಲಿಸಿದ ಡಾ.ಸಿ.ಎಚ್.ವಿ.ಎಸ್.ವಿ ಪ್ರಸಾದ್

ಹುಬ್ಬಳ್ಳಿ: ಜನರಿಗೆ ಉತ್ತಮ ಸೇವೆ ನೀಡುವ ಇಲಾಖೆ ಪೊಲೀಸ್ ಇಲಾಖೆಯಾಗಿದೆ. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸುವಲ್ಲಿ ಪೊಲೀಸ್ ಇಲಾಖೆಯ ಕಾರ್ಯ ಮಹತ್ವಾಗಿದೆ. ಜನಸ್ನೇಹಿ ಆಡಳಿತ ನೀಡಲು ಪೊಲೀಸ್ ಇಲಾಖೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಹುತಾತ್ಮರಾದವರಿಗೆ ಹುತಾತ್ಮರ ದಿನಾಚರಣೆ ಮೂಲಕ ಗೌರವ ಸಮರ್ಪಣೆ ಮಾಡಲಾಯಿತು.

ಹುಬ್ಬಳ್ಳಿಯ ಸಿಎಆರ್ ಮೈದಾನದಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್‌ನಿಂದ ಹಮ್ಮಿಕೊಳ್ಳಲಾಗಿದ್ದ ಪೊಲೀಸರ ಹುತಾತ್ಮ ದಿನಾಚರಣೆಯಲ್ಲಿ ಸ್ವರ್ಣ ಗ್ರೂಪ್ ಆಫ್ ಕಂಪನಿಯ ಮಾಲೀಕರು, ಸಮಾಜ ಸೇವಕರಾದ ಡಾ.ಸಿ.ಎಚ್.ವಿ.ಎಸ್.ವಿ ಪ್ರಸಾದ್ ಅವರು ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಣೆ ಮಾಡಿದರು.

1959 ಅಕ್ಟೋಬರ್ 21 ರಂದು ಲಡಾಖ್‌ನಲ್ಲಿ ಚೀನಾ ದಾಳಿ ಮಾಡಿದಾಗ ವೀರಾವೇಶ ಹೋರಾಡಿ 10 ಜನ ಸಿಆರ್‌ಪಿಎಫ್ ಪೊಲೀಸರು ಹುತಾತ್ಮರಾದರು. ಅಲ್ಲದೇ 9 ಜನ ಪೊಲೀಸರನ್ನು ಚೀನಾ ವಶಕ್ಕೆ ಪಡೆಯಿತು. ಈ ಘಟನೆಯನ್ನು ನೆನೆಯುವ ನಿಟ್ಟಿನಲ್ಲಿ ಮತ್ತು ದೇಶ ಹಾಗೂ ರಾಜ್ಯಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಣೆ ಮಾಡಿದ ಪೊಲೀಸ್ ಸಿಬ್ಬಂದಿಯನ್ನು ಸ್ಮರಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಅಕ್ಟೋಬರ್ 21 ರಂದು ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತದೆ. ಪ್ರತಿ ವರ್ಷ ಸುಮಾರು 300ಕ್ಕೂ ಅಧಿಕ ಪೊಲೀಸರು ಹುತಾತ್ಮರಾಗುತ್ತಿದ್ದಾರೆ. ದೇಶದಾದ್ಯಂತ ಇಲ್ಲಿಯವರೆಗೆ ಸುಮಾರು 37 ಸಾವಿರಕ್ಕೂ ಅಧಿಕ ಪೊಲೀಸರು ಹುತಾತ್ಮರಾಗಿದ್ದಾರೆ. ಪ್ರತಿ ದಿನವೂ ಹೊಸ ಸವಾಲುಗಳನ್ನು ಎದುರಿಸುವ ಪೊಲೀಸರ ಸೇವೆ ಅನನ್ಯ. ಹಗಲು ರಾತ್ರಿಯನ್ನದೇ ಬಿಸಿಲು ಮಳೆಯನ್ನು ಲೆಕ್ಕಿಸದೇ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿರುವ ಪೊಲೀಸರಿಗೆ ಗೌರವ ಸೂಚಿಸಿದರು.

Edited By : Vinayak Patil
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

21/10/2024 04:49 pm

Cinque Terre

47.19 K

Cinque Terre

2

ಸಂಬಂಧಿತ ಸುದ್ದಿ