ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸ್ವಇಚ್ಛೆಯಿಂದ ರಾಜೀನಾಮೆ ಕೊಟ್ಟಿದ್ದೇನೆ - ಸ್ವತಂತ್ರವಾಗಿ ಸ್ಪರ್ಧಿಸಲು ಸಿದ್ಧ ಎಂದ ಸಿ.ಪಿ.ಯೋಗೇಶ್ವರ್

ಹುಬ್ಬಳ್ಳಿ: ಸ್ವಇಚ್ಛೆಯಿಂದ ರಾಜೀನಾಮೆ ಸಭಾಧ್ಯಕ್ಷರಿಗೆ ರಾಜೀನಾಮೆ ಕೊಟ್ಟಿದ್ದೇನೆ. ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದಿಂದ ಶಾಸಕರಾಗಿದ್ದರು. ಅವರ ರಾಜೀನಾಮೆಯಿಂದಾಗಿ ಉಪಚುನಾವಣೆ ನಡೆಯುತ್ತಿದೆ. ಜನಗಳ ಮಧ್ಯೆ ಇರುವ ಆಸೆ ಹೊಂದಿದ್ದೇನೆ. ಹೀಗಾಗಿ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಟಿಕೆಟ್ ಸಿಕ್ಕರೂ ಸರಿ ಸಿಗದಿದ್ದರೂ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದ್ದೇನೆ ಎಂದು ಸಿ.ಪಿ.ಯೋಗೇಶ್ವರ ಹೇಳಿದರು.

ರಾಜೀನಾಮೆ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಾರ ಹತ್ತಿರ ಸಂಪರ್ಕ ಮಾಡಿಲ್ಲ. ಇವತ್ತು ಬಿಜೆಪಿ ವರಿಷ್ಠರಿಗೆ ಮನವಿ ಮಾಡತ್ತೇನೆ. ಒಂದು ಅವಕಾಶ ಮಾಡಿಕೊಡಿ. ಉಪಚುನಾವಣೆಯಲ್ಲಿ ಜನರು ಗೆದ್ದೆ ಗೆಲ್ಲಿಸತ್ತಾರೆಂಬ ನಂಬಿಕೆ ಇದೆ. ಹೀಗಾಗಿ ಕುಮಾರಸ್ವಾಮಿ ಅವರು ಸ್ಪರ್ಧೆಗೆ ಅವಕಾಶ ಮಾಡಿಕೊಡಲಿ. ವರಿಷ್ಠರು ಕೊನೆ ಗಳಿಗೆಯಲ್ಲಿ ಆದರೂ ಸಹಿತ ನನಗೆ ಅವಕಾಶ ಕೊಡಬೇಕು ಎಂದು ತಿಳಿಸಿದರು.

ಪಕ್ಷದ ಎಲ್ಲ ನಾಯಕರು ನಮ್ಮ ಪರವಾಗಿ ಧ್ವನಿ ಎತ್ತಿದ್ದಾರೆ. ನನಗೆ ಟಿಕೆಟ್ ನೀಡಬೇಕೆಂದು ತಿಳಿಸಿದ್ದಾರೆ. ಆದರೆ ಈವರೆಗೆ ನನಗೆ ಸ್ಪಂದನೆ ಸಿಕ್ಕಿಲ್ಲ. ಇನ್ನೂ ಕಾಲಾವಕಾಶ ಇದೆ ಕಾದು ನೋಡೋಣಾ ಎಂದರು.

ನನಗೆ ಬಿಜೆಪಿಯಲ್ಲಿ ಇರಬೇಕು. ಎನ್‌ಡಿಎ ಅಭ್ಯರ್ಥಿಯಾಗಬೇಕೆಂಬ ಆಸೆಯಿದೆ. ಬಿಜೆಪಿಯಲ್ಲಿ ಕೆಲಸ ಮಾಡಿದ್ದೇನೆ. ಅನುಭವ ನೋಡಿ ಪಕ್ಷ ಟಿಕೆಟ್ ನೀಡಬೇಕು. ಇಲ್ಲದೇ ಹೋದಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡುವ ಇಚ್ಛೆ ಹೊಂದಿದ್ದೇನೆ ಎಂದು ಸಿಪಿ ಯೋಗೇಶ್ವರ್ ಸ್ಪಷ್ಟಪಡಿಸಿದರು.

Edited By : Vinayak Patil
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

21/10/2024 05:11 pm

Cinque Terre

30.49 K

Cinque Terre

6

ಸಂಬಂಧಿತ ಸುದ್ದಿ