ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಉದ್ಯಮಿ ಮನೆಯಲ್ಲಿ ಸಿಕ್ಕ ಹಾರ್ಡ್ ಡಿಸ್ಕ್‌ಗಳಲ್ಲಿ ಖಾಸಗಿ ವೀಡಿಯೊ ಪತ್ತೆ

ಬೆಳಗಾವಿ: ಉದ್ಯಮಿ ಸಂತೋಷ್ ಪದ್ಮನ್ನವರ ಹತ್ಯೆ ಪ್ರಕರಣ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಶಾಕ್ ಎದುರಾಗಿದೆ. ತನಿಖೆ ವೇಳೆ ಉದ್ಯಮಿಯ ಕರಾಳ ಮುಖ ಬೆಳಕಿಗೆ ಬಂದಿದೆ ಎನ್ನಲಾಗಿದ್ದು, ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

ಅ.9ರಂದು ಹೃದಯಾಘಾತದಿಂದ ಸಂತೋಷ್ ಮೃತಪಟ್ಟಿದ್ದಾರೆ ಎಂದು ಅಂತ್ಯಸಂಸ್ಕಾರ ಮಾಡಲಾಗಿತ್ತು. ಈ ಬಗ್ಗೆ ಸಂಶಯ ಬಂದು ಅ.14ರಂದು ತಾಯಿ ಸೇರಿ 5 ಜನರ ವಿರುದ್ಧ ಸಂತೋಷ್‍ರ ಮಗಳು ಕೊಲೆ ಕೇಸ್ ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದಾಗ, ಪತ್ನಿ ಉಮಾ ಹಾಗೂ ಇಬ್ಬರು ಫೇಸ್‍ಬುಕ್ ಗೆಳೆಯರು ಸೇರಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿತ್ತು. ಈ ಸಂಬಂಧ ಮಾಳಮಾರುತಿ ಠಾಣೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಸಂತೋಷರ ಬಗ್ಗೆ ಹಲವಾರು ಸಂಗತಿಗಳು ಬೆಳಕಿಗೆ ಬಂದಿದೆ ಎನ್ನಲಾಗಿದೆ.

ತನಿಖೆ ವೇಳೆ ಹಾರ್ಡ್ ಡಿಸ್ಕ್‌ನಲ್ಲಿರುವ ಗಂಡನ ಅಶ್ಲೀಲ ವೀಡಿಯೊ ಕುರಿತು ಪತ್ನಿ ಉಮಾ ಪೊಲೀಸರ ಮುಂದೆ ಮಾಹಿತಿ ನೀಡಿದ್ದಳು. ಅಲ್ಲದೇ ಮಕ್ಕಳೆದುರು ಕೂಡ ಬೆತ್ತಲಾಗಿ ಸಂತೋಷ್ ಓಡಾಡುತ್ತಿದ್ದರು ಎಂದು ಹೇಳಿದ್ದಳು.‌ ಹಾಗಾಗಿ ಉದ್ಯಮಿ ಸಂತೋಷರ ಮನೆ ತಪಾಸಣೆ ವೇಳೆ ಅವರು ಬೇರೆ ಬೇರೆ ಹೆಣ್ಣುಗಳ ಜೊತೆ ಕಳೆದ ಖಾಸಗಿ ವೀಡಿಯೊಗಳಿರುವ 13 ಹಾರ್ಡ್ ಡಿಸ್ಕ್‌ಗಳು ಪತ್ತೆಯಾಗಿವೆ ಎಂದು ಮೂಲಗಳು ಮಾಹಿತಿ ನೀಡಿದೆ.‌

ತನಿಖೆ ವೇಳೆ ಸಂತೋಷ್ ಮನೆಯಿಂದ ಡಿಸ್ಕ್‌ಗಳು, ಸಿಸಿ ಟಿವಿ ಡಿವಿಆರ್, ಮೂರು ಪೆನ್‍ಡ್ರೈವ್‍ಗಳು ಪೊಲೀಸರ ಕೈ ಸೇರಿದ್ದು, ಎಲ್ಲಾ ದಾಖಲೆಗಳನ್ನು ಪರಿಶೀಲನೆಗಾಗಿ ಎಫ್‍ಎಸ್‍ಎಲ್‍ಗೆ ಕಳಿಸಿದ್ದಾರೆ.

Edited By : Vinayak Patil
PublicNext

PublicNext

21/10/2024 05:26 pm

Cinque Terre

21.48 K

Cinque Terre

0

ಸಂಬಂಧಿತ ಸುದ್ದಿ