ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಪೊಲೀಸ್ ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಕೊಡಗು: ದೇಶದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಆಸ್ತಿ ರಕ್ಷಣೆ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸರಿಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತ್ರಿಪಾಠಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಸೇರಿದಂತೆ ಹಲವರು ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಹೂಗುಚ್ಛ ಅರ್ಪಿಸಿ, ಗೌರವ ನಮನ ಸಲ್ಲಿಸಿದರು.

ಪೊಲೀಸ್ ಕವಾಯತು ಸಿಬ್ಬಂದಿಗಳು ಮೂರು ಸುತ್ತು ವಾಲಿ ಫೈರಿಂಗ್ ನಡೆಸಿದರು. ಈ ಸಂದರ್ಭದಲ್ಲಿ ಗಣ್ಯರು ಸೇರಿದಂತೆ ಎಲ್ಲರೂ ಎದ್ದು ನಿಂತು ಗೌರವ ವಂದನೆ ಸಲ್ಲಿಸಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪೊಲೀಸರ ಕರ್ತವ್ಯ ನಿಷ್ಠೆಯನ್ನು ಸದಾ ಸ್ಮರಿಸುವಂತಾಗಬೇಕು. ಸಮಾಜದ ರಕ್ಷಣೆ ಮಾಡುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ. ಪೊಲೀಸರು ಸಮಾಜಕ್ಕೆ ನೀಡಿದ ಸಂದೇಶಗಳನ್ನು ಮರೆಯಬಾರದು ಎಂದು ಹೇಳಿದರು.

Edited By : Ashok M
PublicNext

PublicNext

21/10/2024 05:36 pm

Cinque Terre

15.94 K

Cinque Terre

0

ಸಂಬಂಧಿತ ಸುದ್ದಿ