ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇಂದ್ರ ಸಚಿವ ಜೋಶಿ ಮನವಿಗೆ ಸ್ಪಂದನೆ - 23ಕ್ಕೆ ರಾಣಿ ಚನ್ನಮ್ಮ ಅಂಚೆ ಚೀಟಿ ಬಿಡುಗಡೆ

ನವದೆಹಲಿ: ಅಕ್ಟೋಬರ್ 23ರಂದು ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮನವರು ಬ್ರಿಟಿಷರ ವಿರುದ್ಧ ಸಾರಿದ ಸಂಗ್ರಾಮದ ವಿಜಯಕ್ಕೆ 200 ವರ್ಷ ಸಂದಲಿದೆ. ಈ ಐತಿಹಾಸಿಕ ವಿಜಯದ ಜ್ಞಾಪಕಾರ್ಥವಾಗಿ ರಾಣಿ ಚೆನ್ನಮ್ಮನವರ ಅಂಚೆ ಚೀಟಿಯನ್ನು ಬಿಡುಗಡೆ ಮಾಡುವಂತೆ ಕಿತ್ತೂರು ಕರ್ನಾಟಕ ನಿಯೋಗದ ಪ್ರಮುಖರೊಂದಿಗೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಸಚಿವ ಪ್ರಹ್ಲಾದ್ ಜೋಶಿಯವರ ಮನವಿಗೆ ಸ್ಪಂದಿಸಿ ತ್ವರಿತವಾಗಿ ರಾಣಿ ಚೆನ್ನಮ್ಮನ ಅಂಚೆ ಚೀಟಿಯನ್ನು ಇದೇ ಅಕ್ಟೋಬರ್ 23ಕ್ಕೆ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಇದು ಕೇಂದ್ರ ಸರ್ಕಾರವು ರಾಣಿ ಚೆನ್ನಮ್ಮನಿಗೆ ಸಲ್ಲಿಸುತ್ತಿರುವ ಗೌರವ. ಈ ತ್ವರಿತ ನಿರ್ಧಾರ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

Edited By : Vijay Kumar
PublicNext

PublicNext

21/10/2024 05:53 pm

Cinque Terre

20.59 K

Cinque Terre

0

ಸಂಬಂಧಿತ ಸುದ್ದಿ