ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ವಿಧಾನ ಪರಿಷತ್ ಉಪ ಚುನಾವಣೆ - 97.91ಶೇ. ಮತದಾನ

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಸೋಮವಾರ ನಡೆದ ಉಪ ಚುನಾವಣೆ‌ಯಲ್ಲಿ ಒಟ್ಟು 97.91 ಶೇಕಡಾ ಮತದಾನ ನಡೆದಿದೆ.

ಒಟ್ಟು 392 ಮತಗಟ್ಟೆಗಳಲ್ಲಿ ಹಲವೆಡೆ 100ಶೇ. ಮತದಾನವಾಗಿದೆ. ಈ ಉಪಚುನಾವಣೆಯಲ್ಲಿ ಒಟ್ಟು 6032 ಮತದಾರರಿದ್ದರು. ಈ ಕ್ಷೇತ್ರದಲ್ಲಿ ವಿಧಾನಪರಿಷತ್ ಸದಸ್ಯರಾಗಿದ್ದ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಇದೀಗ ಉಡುಪಿ ಚಿಕ್ಕಮಗಳೂರು‌ ಕ್ಷೇತ್ರದ ಸಂಸದರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಂದ ತೆರವಾಗಿರುವ ಸ್ಥಾನಕ್ಕೆ ಈ ಚುನಾವಣೆ ನಡೆದಿದೆ.

ಈ ಬಾರಿ ನಡೆಯುವ ಚುನಾವಣೆಗೆ ನಾಲ್ಕು ಮಂದಿ ಅಭ್ಯರ್ಥಿಗಳು‌ ಸ್ಪರ್ಧಿಸಿದ್ದಾರೆ. ಬಿಜೆಪಿಯಿಂದ ಕಿಶೋರ್ ಬಿ.ಆರ್ , ಕಾಂಗ್ರೆಸ್ ನಿಂದ ರಾಜು ಪೂಜಾರಿ , ಎಸ್ ಡಿ ಪಿ ಐ ನಿಂದ ಅನ್ವರ್ ಸಾದತ್.ಎಸ್ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ ಸ್ಪರ್ಧಿಸಿದ್ದಾರೆ.

Edited By : Abhishek Kamoji
Kshetra Samachara

Kshetra Samachara

21/10/2024 06:38 pm

Cinque Terre

2.51 K

Cinque Terre

0

ಸಂಬಂಧಿತ ಸುದ್ದಿ