ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: "ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ" ಸಭೆ

ಬೆಳಗಾವಿ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಜಿಲ್ಲೆಯಲ್ಲಿ ಸಮರ್ಪಕ ಅನುಷ್ಠಾನಗೊಳಿಸಬೇಕು ಎಂದು  ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್ ಪಾಟೀಲ  ಅವರು ತಿಳಿಸಿದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ" ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ‌ ಅವರು, ಬೆಳಗಾವಿ ಅತೀ ದೊಡ್ಡ ಜಿಲ್ಲೆಯಾಗಿದ್ದು, ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಎಲ್ಲ ಅಧಿಕಾರಿಗಳು ಅನುಷ್ಠಾನ ಸಮಿತಿ ಸದಸ್ಯರು ನಿರಂತರ ಶ್ರಮಿಸಿದ್ದಾರೆ. ಕೆಲವು ತಾಂತ್ರಿಕ ದೋಷಗಳನ್ನು ಸರಿ ಪಡಿಸಿ ಪಂಚ ಗ್ಯಾರಂಟಿ ಯೋಜನೆಗಳನ್ನು ಎಲ್ಲ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಪಡಿತರ ಪಡೆಯಲು ಬಾರದ ಅಂಗವಿಕಲರ ಮನೆಗಳಿಗೆ ಓಟಿಪಿ ಆಧಾರಿತ ಪಡಿತರ ತಲುಪಿಸಬೇಕು. ಅತೀ ಬಡವರು, ಅನಾರೋಗ್ಯ ಪೀಡಿತರ ಹೊಂದಿದ ಮನೆ ಮನೆಗಳಿಗೆ ಪಡಿತರ ವಿತರಿಸಲು ಆಹಾರ ಇಲಾಖೆ ಕಾರ್ಯ ನಿರ್ವಹಿಸಬೇಕು. ಇದರಿಂದ ಯಾವುದೇ ಫಲಾನುಭವಿಗಳು ವಂಚಿತರಾಗುವುದಿಲ್ಲ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್ ಪಾಟೀಲ ಬ್ಯಾಡಗಿ ಹೇಳಿದರು.

ಜಿಲ್ಲೆಯಲ್ಲಿ ಗೃಹ ಬಳಕೆ ಅಂದಾಜು 10 ಲಕ್ಷ 34 ಸಾವಿರ ಜನರು 200 ಯುನಿಟ್ ಒಳಗಾಗಿ ವಿದ್ಯುತ್ ಬಳಕೆ ಮಾಡುತ್ತಿದ್ದಾರೆ. 

35 ಸಾವಿರ ಅರ್ಹ ಜನರು ಗೃಹಜ್ಯೋತಿ ಯೋಜನೆ ಬಳಕೆ ಮಾಡುತ್ತಿಲ್ಲ ಹಾಗಾಗಿ ಹಂತವರಿಗೆ ಇದರ ಕುರಿತು ಮಾಹಿತಿ ನೀಡಿ ನೋಂದಣಿ ಮಾಡಿಸಲಾಗುತ್ತಿದೆ ಎಂದು ಹೆಸ್ಕಾಂ ಅಧಿಕಾರಿಗಳು ವಿವರಿಸಿದರು.

ಪ್ರತಿ ತಿಂಗಳು ಸರಾಸರಿ 40 ಮಿಲಿಯನ್ ಯೂನಿಟ್ ಬಳಕೆ ಮಾಡಲಾಗುತ್ತಿದ್ದು, ಸುಮಾರ 38 ಕೋಟಿ ರೂಪಾಯಿ ಅಷ್ಟು ತಿಂಗಳಿಗೆ ಸರ್ಕಾರ ವೆಚ್ಚ ಭರಿಸುತ್ತಿದೆ. ಪ್ರತಿ ವರ್ಷಕ್ಕೆ ಸುಮಾರು 531 ಕೋಟಿ ರೂಪಾಯಿಗಳನ್ನು ಸರ್ಕಾರ ನೀಡುತ್ತಿದೆ ಎಂದು ಹೆಸ್ಕಾಂ ಅಧಿಕಾರಿಗಳು ಹೇಳಿದರು.

   

Edited By : PublicNext Desk
Kshetra Samachara

Kshetra Samachara

21/10/2024 06:53 pm

Cinque Terre

4.48 K

Cinque Terre

0

ಸಂಬಂಧಿತ ಸುದ್ದಿ