ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ: ಮಲೆನಾಡು ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ರೈತರಿಂದ ಬೃಹತ್ ಮೆರವಣಿಗೆ

ಸಾಗರ: ಮಹಾಗಣಪತಿ ದೇವಸ್ಥಾನದಿಂದ ಸೋಮವಾರ ಮಲೆನಾಡು ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಡಾ. ಎಚ್.ಗಣಪತಿಯಪ್ಪ ಸ್ಥಾಪಿತ ಜಿಲ್ಲಾ ರೈತ ಸಂಘ ಮತ್ತು ಮಲೆನಾಡು ರೈತರ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಬೃಹತ್ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಮತ್ತು ಜನಾಂದೋಲನಾ ಜಾಥಕ್ಕೆ ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಕಹಳೆ ಊದುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸೊರಬ ತಾಲ್ಲೂಕು ಶೀಗೆಹಳ್ಳಿ ಗ್ರಾಮದ 100ಕ್ಕೂ ಹೆಚ್ಚು ಕುಟುಂಬಗಳಿಗೆ ಒಕ್ಕಲೆಬ್ಬಿಸಲು ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ರೈತರು ಅರೆಬೆತ್ತಲೆಯಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಗಣಪತಿ ದೇವಸ್ಥಾನದಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಾವಿರಾರು ರೈತರು ಬಾರಿಕೋಲು ಬಾರಿಸಿಕೊಳ್ಳತ್ತಾ ಮೆರವಣಿಗೆಯಲ್ಲಿ ಪಾಲ್ಗೊಂಡರು.

ಪ್ರತಿಭಟನೆಯಲ್ಲಿ , ಮಾಜಿ ಸಚಿವ ಹರತಾಳು ಹಾಲಪ್ಪ,ಸಿಗಂದೂರು ಕ್ಷೇತ್ರದ ಧರ್ಮದರ್ಶಿ ಡಾ. ರಾಮಪ್ಪ, ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ, ತೀ.ನ.ಶ್ರೀನಿವಾಸ್, ಟಿ.ಡಿ.ಮೇಘರಾಜ್, ಮಲ್ಲಿಕಾರ್ಜುನ ಹಕ್ರೆ, ಡಾ. ರಾಜನಂದಿನಿ ಕಾಗೋಡು, ರವಿ ಕುಗ್ವೆ, ರಮೇಶ್ ಕೆಳದಿ, ಹೊಯ್ಸಳ ಗಣಪತಿಯಪ್ಪ, ಶ್ರೀಕರ್, ಪರಶುರಾಮ ಸೀಗೆಹಳ್ಳಿ, ಡಾ. ರಾಮಚಂದ್ರಪ್ಪ, ಭರ್ಮಪ್ಪ ಅಂದಾಸುರ, ಶಿವಾನಂದ ಕುಗ್ವೆ, ಎನ್.ಡಿ.ವಸಂತ ಕುಮಾರ್, ರೇವಪ್ಪ ಕೆ. ಹೊಸಕೊಪ್ಪ ಇನ್ನಿತರರು ಹಾಜರಿದ್ದರು.

Edited By : Suman K
Kshetra Samachara

Kshetra Samachara

21/10/2024 07:08 pm

Cinque Terre

2.22 K

Cinque Terre

0

ಸಂಬಂಧಿತ ಸುದ್ದಿ