ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಳೆ ನಿಲ್ಲುವವರೆಗೂ ಚಿಕ್ಕಮಗಳೂರು ಪ್ರವಾಸ ಮುಂದೂಡುವಂತೆ ಜಿಲ್ಲಾಧಿಕಾರಿ ಮೀನಾನಾಗರಾಜ್ ಮನವಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹಿಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳು ಹಳದಿ ಅಲರ್ಟ್ ಇದ್ದು ಕೆರೆ, ನದಿಗಳು ತುಂಬಿ ಅಪಾಯಕಾರಿ ಮಟ್ಟ ಮೀರಿ ಹರಿಯುತ್ತಿದೆ. ಹಲವೆಡೆ ಭೂಕುಸಿತ ಸಹ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ/ಪ್ರವಾಸಿಗರಿಗೆ ಮುಂದಿನ ಒಂದು ವಾರದವರೆಗೆ ಅಥವಾ ಮಳೆ ಕಡಿಮೆಯಾಗುವವರೆಗೆ ಮುನ್ನೆಚ್ಚರಿಕೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರು/ಪ್ರವಾಸಿಗರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರ ವಹಿಸಬೇಕು. ಸಾರ್ವಜನಿಕರು ಜಾನುವಾರುಗಳನ್ನು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳಿ, ಕೆರೆ ಕಟ್ಟೆಗಳಿಗೆ ತೆರಳಬಾರದು. ಅತಿಯಾದ ಮಳೆಯಿಂದ ಧರೆ. ಗುಡ್ಡ ಕುಸಿತ ಉಂಟಾಗುವ ಸಂಭವವಿರುವುದರಿಂದ ಚಾರಣಿಗರು ಹಾಗೂ ಹೋಂ ಸ್ಟೇ, ರೆಸಾರ್ಟ್, ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳುವ ಟ್ರಕ್ಕಿಂಗ್ ಅನ್ನು ಒಂದು ವಾರ ಸ್ಥಗಿತಗೊಳಿಸಬೇಕೆಂದು ಆದೇಶ ಹೊರಡಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

21/10/2024 07:40 pm

Cinque Terre

900

Cinque Terre

0

ಸಂಬಂಧಿತ ಸುದ್ದಿ