ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರತಿ ಕುಟುಂಬ ಎರಡಕ್ಕಿಂತ ಹೆಚ್ಚು ಮಕ್ಕಳು ಹೊಂದಬೇಕೆಂದ ಚಂದ್ರಬಾಬು ನಾಯ್ಡ್‌, ಈ ಬಗ್ಗೆ ನಿಮ್ಮ ಅಭಿಪ್ರಾಯ ಕಮೆಂಟ್‌ ಮಾಡಿ ತಿಳಿಸಿ

ವಿಶ್ವದಲ್ಲೇ ಹೈಯೆಸ್ಟ್‌ ಜನಸಂಖ್ಯೆ ಹೊಂದಿರುವ ರಾಷ್ಟ್ರ ಭಾರತ ಆದರೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ರಾಜ್ಯದ ಜನಸಂಖ್ಯೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.ರಾಜ್ಯದಲ್ಲಿ ವಯಸ್ಸಾದವರ ಸಂಖ್ಯೆ ಹೆಚ್ಚಾಗುತ್ತಿದ್ದು ಭಾರತದ ಸುಭದ್ರ ಭವಿಷ್ಯಕ್ಕಾಗಿ ಹೆಚ್ಚು ಹೆಚ್ಚು ಮಕ್ಕಳನ್ನು ಹೊಂದಬೇಕು ಅಂದಿದ್ದಾರೆ.ಅಮರಾವತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಿದ ಈ ಹೇಳಿಕೆ ಪರ ವಿರೋಧ ಚರ್ಚೆಗೆ ಕಾರಣವಾಗುತ್ತಿದೆ.ಕುಟುಂಬಗಳು ಕನಿಷ್ಠ ಎರಡು ಅಥವಾ ಹೆಚ್ಚಿನ ಮಕ್ಕಳನ್ನು ಹೊಂದುವ ಗುರಿಯನ್ನು ಹೊಂದಿರಬೇಕು,ಹಿಂದೆ ಜನಸಂಖ್ಯೆ ನಿಯಂತ್ರಣ ಬಗ್ಗೆ ಮಾತನಾಡುತ್ತಿದ್ದೆ ಈಗ ನನ್ನ ನಿಲುವು ಬದಲಿಸಿದ್ದೇನೆ,ಎರಡು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವ ಕಾನೂನನ್ನು ತರಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ಚಂದ್ರಬಾಬು ನಾಯ್ಡ್‌ ಹೇಳಿದ್ದಾರೆ.

Edited By : Somashekar
PublicNext

PublicNext

21/10/2024 07:41 pm

Cinque Terre

20.59 K

Cinque Terre

5

ಸಂಬಂಧಿತ ಸುದ್ದಿ