ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಆಯ್ಕೆ‌ ಕಸರತ್ತು ಮುಂದುವರಿಕೆ - ನಾಳೆ ಜೆಡಿಎಸ್ ಕಾರ್ಯಕರ್ತರ ಸಭೆ ಕರೆದ HDK

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಗೆ ಮೈತ್ರಿ ಅಭ್ಯರ್ಥಿ ಆಯ್ಕೆ ಕಸರತ್ತು ಇನ್ನೂ ಮುಂದುವರೆದಿದೆ. ಈಗಾಗಲೇ ಸಿಪಿ ಯೋಗೇಶ್ವರ್ ಪಕ್ಷೇತರರಾಗಿ ಸ್ಪರ್ಧೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ. ಮೈತ್ರಿ ಪಕ್ಷದಿಂದ ಚನ್ನಪಟ್ಟಣ ಕ್ಷೇತ್ರಕ್ಕೆ ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಬಗ್ಗೆ ಇನ್ನೂ ಚರ್ಚೆಗಳು ನಡೆಯುತ್ತಲೇ ಇದೆ. ಸಿಪಿ ಯೋಗೇಶ್ವರ್ ಮೈತ್ರಿಯಿಂದ ದೂರ ಸರಿದ ಬೆನ್ನಲ್ಲೇ ಇಂದು ಸಂಜೆ ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ಅವರನ್ನ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಬೇಕು ಎಂಬ ಒತ್ತಾಯ ಸಹ ಇದೆ. ಇದರ ನಡುವೆ ಸಿಪಿ ಯೋಗೇಶ್ವರ್ ಬಂಡಾಯ ಜೆಡಿಎಸ್‌ಗೆ ತಲೆಬಿಸಿಯಾಗಿದೆ. ಅಲ್ಲದೆ ಕಾಂಗ್ರೆಸ್‌ನಿಂದ ಯಾರು ಅಭ್ಯರ್ಥಿ ಎಂದು ಇನ್ನೂ ಫೈನಲ್ ಆಗಿಲ್ಲ. ಈ ಹಿನ್ನೆಲೆಯಲ್ಲಿ ಈ ಸಂದರ್ಭದಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಬಗ್ಗೆ ದೇವೇಗೌಡರ ಜೊತೆ ಕುಮಾರಸ್ವಾಮಿ ಸಮಾಲೋಚನೆ ನಡೆಸಿದ್ದಾರೆ.

ನಾಳೆ ಬೆಳಗ್ಗೆ 11 ಗಂಟೆಗೆ ಜೆಪಿ ಭವನದಲ್ಲಿ ಚನ್ನಪಟ್ಟಣ ಮುಖಂಡರು, ಹಿರಿಯ ಕಾರ್ಯಕರ್ತರ ಸಭೆ ನಡೆಸಲು ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ. ನಾಳೆ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಅಭ್ಯರ್ಥಿ ಆಯ್ಕೆ ಅಂತಿಮಗೊಳಿಸಲು ನಿರ್ಧರಿಸಲಾಗಿದೆ. ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್ ಸ್ಪರ್ಧೆ ಮಾಡ್ತಾರಾ ಅಥವಾ ಪಕ್ಷದ ಕಾರ್ಯಕರ್ತರಿಗೆ ನೀಡ್ತಾರೋ ಕಾದು ನೋಡಬೇಕಿದೆ.

Edited By : Vijay Kumar
PublicNext

PublicNext

21/10/2024 08:02 pm

Cinque Terre

21.37 K

Cinque Terre

1

ಸಂಬಂಧಿತ ಸುದ್ದಿ