ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಕೃಷಿ ಜೊತೆಗೆ ಹೈನುಗಾರಿಕೆಗೂ ಉತ್ತೇಜನ ನೀಡಿ - ಶಾಸಕ ತಮ್ಮಯ್ಯ

ಚಿಕ್ಕಮಗಳೂರು: ರೈತರ ಉಪ ಕಸುಬಾದ ಹೈನುಗಾರಿಕೆಗೆ ಉತ್ತೇಜನ ನೀಡಲು ಸರ್ಕಾರ ಹೊಸ ಹೊಸ ತಳಿಗಳನ್ನು ಸಂಶೋಧನೆ ಮಾಡಿ ರಾಸುಗಳ ರಕ್ಷಣೆಗೆ ಮುಂದಾಗಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.

ತೇಗೂರು ಗ್ರಾ.ಪಂ ವ್ಯಾಪ್ತಿಯ ನಲ್ಲೂರಿನಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ತಾಲ್ಲೂಕು ಪಂಚಾಯಿತಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಆರನೇ ಸುತ್ತಿನ ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ರೈತರ ಜೀವನಾಡಿಯಾಗಿರುವ ಪಶುಸಂಗೋಪನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಹೆಚ್ಚು ಒತ್ತು ನೀಡಿದ್ದು, ಹೊಸ ಹೊಸ ತಳಿಗಳನ್ನು ಸಂಶೋಧಿಸಿ ರಕ್ಷಣೆಗೆ ಮುಂದಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ರಾಸುಗಳಿಗೆ ಕಾಲುಬಾಯಿ ರೋಗದ ಲಸಿಕೆಯನ್ನು ಹಾಕಿಸುವ ಮೂಲಕ ಅವುಗಳ ರಕ್ಷಣೆ ಮಾಡಬೇಕೆಂದು ಹೇಳಿದರು. ಕೃಷಿಯ ಜೊತೆಗೆ ಉಪ ಕುಸುಬಾಗಿ ಹೈನುಗಾರಿಕೆಯನ್ನು ಪ್ರಾರಂಭಿಸಿದರೆ ರೈತರ ಆರ್ಥಿಕ ಮಟ್ಟ ಸುಧಾರಿಸುತ್ತದೆ.

ಆದ್ದರಿಂದ ಗೋವುಗಳನ್ನು ಹೊಂದಿರುವ ರೈತರು ಉದಾಸೀನತೆ ತಾಳದೆ ಲಸಿಕೆಯನ್ನು ಹಾಕಿಸುವ ಮೂಲಕ ಕಾಲುಬಾಯಿ ರೋಗ ಸಂಪೂರ್ಣ ನಿಯಂತ್ರಣಕ್ಕೆ ಸಹಕರಿಸಬೇಕೆಂದು ಮನವಿ ಮಾಡಿದರು.

Edited By : PublicNext Desk
Kshetra Samachara

Kshetra Samachara

21/10/2024 08:40 pm

Cinque Terre

640

Cinque Terre

0

ಸಂಬಂಧಿತ ಸುದ್ದಿ