ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಚಿವ ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊರಿ ರಾಜ್ಯಪಾಲರಿಗೆ ದೂರು ನೀಡಿದ ಟಿ ಜೆ ಅಬ್ರಹಾಂ

ಬೆಂಗಳೂರು: ಮೂಡಾ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪು ನೀಡಿದ್ದ ವೇಳೆ ನ್ಯಾಯಾಲಯದ ಆದೇಶವನ್ನು ಪೊಲಿಟಿಕಲ್ ಜಡ್ಜ್‌ಮೆಂಟ್ ಎಂದಿದ್ದ ಸಚಿವ ಜಮೀರ್ ಅಹಮದ್ ಮತ್ತು ಅವರು ಹೇಳಿಕೆ ನೀಡಿ ತಿಂಗಳು ಕಳೆದರೂ ಜಮೀರ್ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದ ಅಡ್ವೋಕೇಟ್ ಜನರಲ್ ವಿರುದ್ಧ ರಾಜ್ಯಪಾಲರು ಕ್ರಮ ತೆಗೆದುಕೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ರಾಜಭವನದಲ್ಲಿ ಇಂದು ಸಂಜೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನ ಭೇಟಿಯಾಗಿ ದೂರು ನೀಡಲಾಗಿದೆ. ಅಲ್ಲದೆ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧವೂ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಬೇಕು ಎಂದು ರಾಜ್ಯಪಾಲರ ಬಳಿ ಅಬ್ರಹಾಂ ಮನವಿ ಮಾಡಿಕೊಂಡಿದ್ದಾರೆ.

ಜಮೀರ್ ಅಹಮದ್ ವಿರುದ್ಧ ಎಜೆ ಒಂದು ತಿಂಗಳಾದರೂ ಕ್ರಮ ತೆಗೆದುಕೊಂಡಿಲ್ಲ. ಈ ಕಾರಣದಿಂದ ಅವರನ್ನು ವಜಾ ಮಾಡಬೇಕು ಎಂದು ಟಿಜೆ ಅಬ್ರಹಾಂ ಆಗ್ರಹಿಸಿದ್ದಾರೆ.

Edited By : Vijay Kumar
PublicNext

PublicNext

21/10/2024 11:09 pm

Cinque Terre

11.56 K

Cinque Terre

0

ಸಂಬಂಧಿತ ಸುದ್ದಿ