ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಆಟವಾಡುವಾಗ ಕೆರೆಗೆ ಬಿದ್ದ ಅಣ್ಣ - ತಂಗಿ ನಾಪತ್ತೆ

ಬೆಂಗಳೂರು: ಆಟವಾಡುವಾಗ ಅಣ್ಣ - ತಂಗಿ ಆಯತಪ್ಪಿ ಕೆರೆಗೆ ಬಿದ್ದು ಮುಳುಗಿ ನಾಪತ್ತೆಯಾಗಿರುವ ಘಟನೆ ಕೆಂಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹರ್ಷ ಲೇಔಟ್‌ನ ಶ್ರೀನಿವಾಸ್ (13) ಮತ್ತು ಮಹಾಲಕ್ಷ್ಮೀ(11) ಕೆರೆಗೆ ಬಿದ್ದಿರುವ ಅಣ್ಣ - ತಂಗಿ. ಸೋಮವಾರ ಸಂಜೆ ಸುಮಾರು 5.30ಕ್ಕೆ ಕೆಂಗೇರಿ ಬಸ್‌ ನಿಲ್ದಾಣದ ಎದುರಿನ ಕೆರೆಯಲ್ಲಿ ಈ ಘಟನೆ ನಡೆದಿದೆ. ಜಯಮ್ಮ ಎಂಬುವವರ ಮಕ್ಕಳಾದ ಶ್ರೀನಿವಾಸ್ ಮತ್ತು ಮಹಾಲಕ್ಷ್ಮೀ ಕೆರೆಯ ವಾಕಿಂಗ್‌ ಪಾತ್‌ನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಿಂದಿಗೆಯೊಂದು ಕೆರೆಗೆ ಉರುಳಿದ ಪರಿಣಾಮ ಮಹಾಲಕ್ಷ್ಮೀ ಬಿಂದಿಗೆ ಎತ್ತಿಕೊಳ್ಳಲು ಕೆರೆಗೆ ಇಳಿದಿದ್ದಾಳೆ. ಈ ವೇಳೆ ಆಕೆ ನೀರಿನಲ್ಲಿ ಮುಳಗಿದ್ದಾಳೆ. ತಂಗಿ ನೀರಿನಲ್ಲಿ ಮುಳುಗುವುದನ್ನು ನೋಡಿದ ಜಾನ್ಸನ್‌ ಸಹ ತಂಗಿಯನ್ನು ಮೇಲಕ್ಕೆ ಎಳೆಯಲು ಕೆರೆಗೆ ಇಳಿದಿದ್ದಾನೆ. ಈ ವೇಳೆ ಆತನೂ ನೀರಿನಲ್ಲಿ ಮುಳುಗಿದ್ದಾನೆ ಎಂದು ತಿಳಿದು ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ, ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ಮುಟ್ಟಿಸಿದ್ದಾರೆ. ಬಳಿಕ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಇಬ್ಬರು ಮಕ್ಕಳಿಗಾಗಿ ಕೆರೆಯಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೆ, ಮಕ್ಕಳು ಪತ್ತೆಯಾಗಿಲ್ಲ. ಅಷ್ಟರಲ್ಲಿ ಕತ್ತಲೆ ಆವರಿಸಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದಾರೆ. ಮಂಗಳವಾರ ಬೆಳಗ್ಗೆ ಕಾರ್ಯಾಚರಣೆ ಮುಂದುವರೆಸಲಿದ್ದಾರೆ. ಈ ಸಂಬಂಧ ಕೆಂಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Edited By : Ashok M
PublicNext

PublicNext

22/10/2024 11:00 am

Cinque Terre

13.8 K

Cinque Terre

1

ಸಂಬಂಧಿತ ಸುದ್ದಿ