ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳಿ ಬಿದ್ದ ಕಂಟೇನರ್

ಬೆಳಗಾವಿ: ಹೊಸ ಆಟೋಗಳನ್ನು ತುಂಬಿಕೊಂಡು ಹೊರಟಿದ್ದ ಕಂಟೇನರ್ ವಾಹನ ಪಲ್ಟಿ ಹೊಡೆದ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಹತ್ತಿರದ ಬಡೆಕ್ಕೊಳ್ಳ ಕ್ರಾಸ್ ಬಳಿ ನಡೆದಿದೆ.

ನಿನ್ನೆ ರಾತ್ರಿ ಬೆಳಗಾವಿಯಿಂದ ಧಾರವಾಡ ಕಡೆ ಹೋಗುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ ಹೊಡೆದಿದೆ. ವಾಹನದಲ್ಲಿ ಹೊಸ ಆಟೋಗಳನ್ನು ತುಂಬಿಕೊಂಡು ಹೋಗುತಿತ್ತು ಎನ್ನಲಾಗುತ್ತಿದೆ. ವಾಹನ ಪಲ್ಟಿ ಹೊಡೆದ ಪರಿಣಾಮ ಚಾಲಕನಿಗೆ ಗಂಭೀರ ಗಾಯವಾಗಿದ್ದು, ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತ ನಡೆದ ತಕ್ಷಣ ಸ್ಥಳಕ್ಕೆ ಆಗಮಿಸದ ಹಿರೇಬಾಗೇವಾಡಿ ಪೊಲೀಸರು ಟ್ರಾಫಿಕ್ ಸಮಸ್ಯೆ ಆಗದಂತೆ ಕ್ರಮ ಕೈಗೊಂಡಿದ್ದಾರೆ.‌ ಹಿರೇಬಾಗೇವಾಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Edited By : Ashok M
PublicNext

PublicNext

22/10/2024 11:35 am

Cinque Terre

9.99 K

Cinque Terre

0

ಸಂಬಂಧಿತ ಸುದ್ದಿ