ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಅ.23ರಂದು ಅಪ್ಪಳಿಸಲಿದೆ "ದಾನಾ' ಸೈಕ್ಲೋನ್!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದಾಗಿ ಅ.23ರ ವೇಳೆಗೆ 'ದಾನಾ' ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ.

ಪೂರ್ವ- ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ಪಶ್ಚಿಮ- ವಾಯುವ್ಯ ದಿಕ್ಕಿನೆಡೆಗೆ ಚಲಿಸುವ ಸಾಧ್ಯತೆ ಇದೆ. ಅ.23ರಂದು ಒಡಿಶಾ, ಪೂರ್ವ- ಮಧ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆ ಇದೆ. ನಂತರ ಚಂಡಮಾರುತವು ವಾಯುವ್ಯಕ್ಕೆ ಚಲಿಸುವ ಸಾಧ್ಯತೆ ಇದ್ದು, ಅ.24ರ ಮುಂಜಾನೆ ಒಡಿಶಾ- ಪಶ್ಚಿಮ ಬಂಗಾಳ ಕರಾವಳಿಯಿಂದ ವಾಯುವ್ಯ ಬಂಗಾಳಕೊಲ್ಲಿಯನ್ನು ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರತಿ ಗಂಟೆಗೆ 120 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ. ಸಮುದ್ರದಕ್ಕೆ ಇಳಿಯದಂತೆ ಮೀನುಗಾರರಿಕೆ ಐಎಂಡಿ ಎಚ್ಚರಿಕೆ ನೀಡಿದೆ.

ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಮುಂದುವರಿಯಲಿದೆ. ಬೆಂಗಳೂರು ನಗರ, ಬೆಂ.ಗ್ರಾಮಾಂತರದ ದೊಡ್ಡಬಳ್ಳಾಪುರ, ಚಾಮರಾಜನಗರದ ಹರದನಹಳ್ಳಿ, ಚಿತ್ರದುರ್ಗದ ಹಿರಿಯೂರು, ದಾವಣಗೆರೆ, ಗದಗ, ಹಾಸನ, ಹಾವೇರಿಯ ಹನುಮಾನಮಟ್ಟಿ, ರಾಮನಗರ, ಶಿವಮೊಗ್ಗದ ಆಗುಂಬೆ, ಯಾದಗಿರಿಯ ಭೀಮರಾಯನಗುಡಿ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಸೋಮವಾರವೂ ವರ್ಷಧಾರೆಯಾಯಿತು.

ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮುಂದಿನ 3 ದಿನ ಹಾಗೂ ದಾವಣಗೆರೆ, ಶಿವಮೊಗ್ಗ, ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ ಅ.22ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಈಗಾಗಲೇ ಯೆಲ್ಲೋ ಅರ್ಲಟ್ ಘೋಷಿಸಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ವಿಜಯನಗರದಲ್ಲಿ ಮುಂದಿನ 4 ದಿನ ಗುಡುಗು ಸಹಿತ ಸಾಧಾರಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಹಗುರ ವರ್ಷಧಾರೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

Edited By : Nirmala Aralikatti
PublicNext

PublicNext

22/10/2024 02:26 pm

Cinque Terre

15.68 K

Cinque Terre

0

ಸಂಬಂಧಿತ ಸುದ್ದಿ