ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮನಗರ : ಮಂಚನಬೆಲೆ ಸೇತುವೆ ಮೇಲೆ ಹರಿದ ನೀರು - ಸಂಪರ್ಕ ಕಡಿತ

ರಾಮನಗರ : ಮಂಚನಬೆಲೆ ಜಲಾಶಯದಿಂದ ಹೆಚ್ಚುವರಿ ನೀರು ಬಂದ ಹಿನ್ನೆಲೆಯಲ್ಲಿ ಜಲಾಶಯದಿಂದ ನೀರನ್ನು ಹೊರ ಬಿಡಲಾಗುತ್ತಿದ್ದು ತಾತ್ಕಾಲಿಕ ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ರಸ್ತೆ ಸಂಪರ್ಕ ಕಡಿತವಾಗಿದೆ.

ಕಳೆದ ಎರಡುವರೆ ವರ್ಷಗಳ ಹಿಂದೆ ಮುಖ್ಯಸೇತುವೆ ಹೆಚ್ಚುವರಿ ಮಳೆಯಿಂದ ಕೊಚ್ಚಿ ಹೋಗಿತ್ತು ಈಗ ತಾತ್ಕಾಲಿಕ ಸೇತುವೆ ಕೂಡ ಮುಳುಗಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದ್ದು, ಕಾವೇರಿ ನೀರಾವರಿ ನಿಗಮದಿಂದ 25 ಲಕ್ಷ ವೆಚ್ಚದಲ್ಲಿ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿತ್ತು. ಈಗ ಹೊಸದಾಗಿ ಸೇತುವೆ ನಿರ್ಮಾಣ ಮಾಡಲು 13 ಕೋಟಿ ವೆಚ್ಚದ ಟೆಂಡರ್ ಕರೆದಿದ್ದು ಎರಡುವರೆ ವರ್ಷಗಳಿಂದಲೂ ಕಾಮಗಾರಿ ನೆನೆಗುದಿಗೆ ಬಿದ್ದಿದೆ.

ಮಂಚನಬೆಲೆ, ಬಿಡದಿ, ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೇ , ರಾಮೋಹಳ್ಳಿ ,ಚಂದ್ರಪ್ಪ ಸರ್ಕಲ್, ದೊಡ್ಡ ಆಲದಮರ, ಕೆಂಗೇರಿಗೆ ಸಂಪರ್ಕಿಸುವ ರಸ್ತೆ ಈಗ ಮುಳುಗಡೆ ಆಗಿರುವುದರಿಂದ ಸಾಕಷ್ಟು ಸಮಸ್ಯೆ ಉಂಟಾಗಿದೆ.

Edited By : Vinayak Patil
Kshetra Samachara

Kshetra Samachara

22/10/2024 04:14 pm

Cinque Terre

780

Cinque Terre

0