ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ರಾಷ್ಟ್ರೀಕೃತ ಬ್ಯಾಂಕುಗಳು ಕಾಫಿ ಬೆಳೆಗಾರರಿಗೆ ನೀಡುತ್ತಿರುವ ಕಿರುಕುಳ ಖಂಡನೀಯ

ಚಿಕ್ಕಮಗಳೂರು: ರಾಷ್ಟ್ರೀಕೃತ ಬ್ಯಾಂಕುಗಳು ಸರ್ಫೆಸಿ ಹೆಸರಿನಲ್ಲಿ ಕಾಫಿ ಬೆಳೆಗಾರರ ಭೂಮಿಯನ್ನು ಹರಾಜು ಪ್ರಕ್ರಿಯೆಗೆ ಮುಂದಾಗಿವೆ. ಈ ಪ್ರಕ್ರಿಯೆಯನ್ನು ಕೂಡಲೆ ಸ್ಥಗಿತಗೊಳಿಸಬೇಕೆಂದು ಕಾಫಿ ಬೆಳೆಗಾರರ ಸಂಘ ಒತ್ತಾಯಿಸಿದೆ. ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಕಾಫಿ ಬೆಳೆಗಾರರ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳೊಂದಿನ ಸಭೆಯಲ್ಲಿ ಮಾತನಾಡಿದ ಮೂಡಿಗೆರೆ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಬಾಲಕೃಷ್ಣ ಸರ್ಫೆಸಿ ಕಾಯಿದೆಯ ಮೂಲಕ ಬೆಳೆಗಾರರಿಗೆ ನೋಟಿಸ್ ನೀಡಿ ಮನೆ ಮತ್ತು ಆಸ್ತಿಯನ್ನು ಆನ್ ಲೈನ್ ವ್ಯವಸ್ಥೆಯಲ್ಲಿ ಹರಾಜು ಮಾಡಲು ನಿರ್ಧರಿಸುವುದು ಖಂಡನೀಯ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾವಿರಾರು ಕಾಫಿ ಬೆಳೆಗಾರರು ಕೃಷಿ ಚಟುವಟಿಕೆಗಳಿಗಾಗಿ ಕೃಷಿ ಸಾಲ ಪಡೆದುಕೊಂಡಿದ್ದಾರೆ.

ಆದರೆ ಅತೀವೃಷ್ಟಿ, ಅನಾವೃಷ್ಟಿಯಿಂದಾಗಿ ಬೆಳೆ ಕೈಗೆ ಸಿಗದೇ ಬೆಳೆಗಾರರು ಸಕಾಲಕ್ಕೆ ಸಾಲ ಮರುಪಾವತಿ ಮಾಡಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಸಾಲ ಮರುಪಾವತಿ ಮಾಡದ ಬೆಳೆಗಾರರಿಗೆ ಬ್ಯಾಂಕ್‌ಗಳು ನೋಟಿಸ್ ನೀಡಿ ಕಿರುಕುಗಳ ನೀಡುತ್ತಿವೆ. ಕೆನರಾ ಬ್ಯಾಂಕ್ ಕಾಫಿತೋಟಗಳನ್ನು ಆನ್‌ಲೈನ್ ಮೂಲಕ ಹರಾಜು ಹಾಕುವ ಪ್ರಕ್ರಿಯೆ ನಡೆಸುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Edited By : PublicNext Desk
Kshetra Samachara

Kshetra Samachara

22/10/2024 05:13 pm

Cinque Terre

280

Cinque Terre

0

ಸಂಬಂಧಿತ ಸುದ್ದಿ