ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು ದಕ್ಷಿಣ ಭಾಗದಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಿಸಿ - ರಾಮನಗರ, ಮಂಡ್ಯ, ಮೈಸೂರು ಭಾಗದ ಶಾಸಕರಿಂದ ಒತ್ತಾಯ

ಬೆಂಗಳೂರು : ರಾಜಧಾನಿ ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಬಗ್ಗೆ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವನ್ನ ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು, ಸಚಿವ ಎಂ.ಬಿ. ಪಾಟೀಲ್‌ ಅವರಿಗೆ ರಾಮನಗರ, ಮಂಡ್ಯ ಹಾಗೂ ಮೈಸೂರು ಭಾಗದ ಜನಪ್ರತನಿಧಿಗಳ ತಂಡವು ಮನವಿ ಮಾಡಿದ್ದಾರೆ.

ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸಿದರೆ, ಈ ಭಾಗದ ಜನತೆಗೆ ಅನುಕೂಲವಾಗುವುದರ ಜೊತೆಗೆ ಬೆಂಗಳೂರು ದಕ್ಷಿಣ ಭಾಗವೂ ವಾಣಿಜ್ಯ ಚಟುವಟಿಕೆಗಳ ತಾಣವಾಗಿ ಮಾರ್ಪಾಡಾಗಲಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ . ರಾಮನಗರ ಶಾಸಕ ಎಚ್.ಎ.ಇಕ್ಬಾಲ್ ಹುಸೇನ್, ಮಾಗಡಿ ಶಾಸಕ, ಎಚ್.ಸಿ.ಬಾಲಕೃಷ್ಣ, ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಶ್ರೀರಂಗಪಟ್ಟಣ ಶಾಸಕ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಮದ್ದೂರು ಶಾಸಕ ಕೆ.ಎಂ. ಉದಯ್‌, ಮಂಡ್ಯ ಶಾಸಕ, ಪಿ.ರವಿಕುಮಾರ್, ಆನೇಕಲ್‌ ಶಾಸಕ ಶಿವಣ್ಣ, ನೆಲಮಂಗಲ ಶಾಸಕ ಎನ್.ಶ್ರೀನಿವಾಸ್, ವಿಧಾನ ಪರಿಷತ್‌ ಶಾಸಕರುಗಳಾದ ಎಸ್.ರವಿ, ದಿನೇಶ್ ಗೂಳಿಗೌಡ, ಪುಟ್ಟಣ್ಣ ಅವರ ತಂಡವು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರಿನ ದಕ್ಷಿಣ ಭಾಗದಲ್ಲಿ ನಿರ್ಮಿಸುವಂತೆ ಒತ್ತಾಯಿಸಿದ್ದಾರೆ.

Edited By : Abhishek Kamoji
PublicNext

PublicNext

22/10/2024 06:03 pm

Cinque Terre

26.15 K

Cinque Terre

1

ಸಂಬಂಧಿತ ಸುದ್ದಿ