ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಭಾರೀ ಮಳೆಗೆ ರಸ್ತೆ ಕಾಣದೆ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನರಸಿಂಹರಾಜಪುರ ತಾಲೂಕಿನ ದೇವದಾನ ಎಸ್ಟೇಟ್ ಬಳಿ ನಡೆದಿದೆ. ಅದೃಷ್ಟವಶಾತ್ 2 ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಳೆಹೊನ್ನೂರು ಸುತ್ತಮುತ್ತಾ ಧಾರಾಕಾರ ಮಳೆಯಾಗುತ್ತಿದ್ದು ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕಾಗಿದೆ.
Kshetra Samachara
22/10/2024 06:31 pm