ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಜಾತಿಗಣತಿ ಅಂಗಿಕರಿಸಲು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

ಚಿಕ್ಕಮಗಳೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾತಿ ಗಣತಿ ವರದಿ ಅಂಗೀಕರಿಸಿ ದಲಿತ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿ ಜಾತಿ ವರದಿ ಶೀಘ್ರವೇ ಅನುಷ್ಟಾನಗೊಳಿಸಿ, ದಲಿತರಿಗೆ ಶೇ.50 ರಿಂದ ಶೇ.75ಕ್ಕೆ ಮೀಸಲಾತಿ ಹೆಚ್ಚಳಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ್ ಮಾತನಾಡಿ ರಾಜ್ಯದ ಜನಸಂಖ್ಯೆಯ ಬಹು ಭಾಗವಾಗಿರುವ ಆದಿವಾಸಿ, ಅಲೆಮಾರಿ, ದಲಿತರು, ಹಿಂದುಳಿದ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಮುಂತಾದ ಶೋಷಿತ ಸಮುದಾಯಗಳು ಹಲವು ದಶಕಗಳಿಂದ ಸಾಮಾಜಿಕ ನ್ಯಾಯ ಕ್ಕಾಗಿ ಹೋರಾಟ ರೂಪಿಸಿಕೊಂಡು ಬಂದಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಎಂದರು ಜಾತಿ ಕೇಂದ್ರಿತ ರಾಜಕಾರಣದಿಂದ ಈ ಜನಾಂಗವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಔದ್ಯೋಗಿಕ ಸ್ಥಿತಿಗಳನ್ನು ಉತ್ತಮಪಡಿಸುವ ಹೊಣೆಗಾರಿಕೆಯಿಂದ ನುಣುಚಿಕೊಂಡಿದೆ. ಇದರಿಂದ ಸಮಾಜ ದಲ್ಲಿ ಅಸಮಾನತೆಯ ಕಂದಕಗಳು ಮತ್ತಷ್ಟ್ಟು ಹೆಚ್ಚಳಗೊಳ್ಳುತ್ತಿದೆ ಎಂದು ತಿಳಿಸಲಾಗಿದೆ ಎಂದರು.

Edited By : PublicNext Desk
Kshetra Samachara

Kshetra Samachara

22/10/2024 06:55 pm

Cinque Terre

180

Cinque Terre

0

ಸಂಬಂಧಿತ ಸುದ್ದಿ