ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿತ್ತೂರು ಉತ್ಸವ ಅದ್ದೂರಿ ಆಚರಣೆಗೆ ಸರ್ವ ಸಿದ್ಧತೆ : ಡಿಸಿ ಮೊಹಮ್ಮದ್ ರೋಷನ್

ಚನ್ನಮ್ಮನ ಕಿತ್ತೂರು : ಕಿತ್ತೂರ‌ ಉತ್ಸವ ಹಾಗೂ ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆ ಕಾರ್ಯಕ್ರಮ ಅದ್ಧೂರಿ ಆಚರಣೆಗೆ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಅವರು ತಿಳಿಸಿದರು.

ಕಿತ್ತೂರು ಉತ್ಸವದ ಅಂಗವಾಗಿ ಮಂಗಳವಾರ ಕಿತ್ತೂರಿನಲ್ಲಿ ಉತ್ಸವದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.

ಚನ್ನಮ್ಮನ‌ ವಿಜಯೋತ್ಸವದ 200ನೇ ವರ್ಷದ ವರ್ಷಾಚರಣೆ ಹಾಗೂ ಕಿತ್ತೂರು ರಾಣಿ ಚನ್ನಮ್ಮನ ಉತ್ಸವವನ್ನು ಅದ್ಧೂರಿ ಹಾಗೂ ಅರ್ಥಪೂರ್ಣ ಆಚರಣೆಗೆ ಅನೇಕ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅಕ್ಟೋಬರ್ 23,24 ಮತ್ತು 25 ಮೂರು ದಿನಗಳ ಕಾಲ ಜರುಗಲಿರುವ ಚನ್ನಮ್ಮನ ಉತ್ಸವ ಕಾರ್ಯಕ್ರಮದಲ್ಲಿ ರಾಜ್ಯ, ರಾಷ್ಟ್ರ ಮಟ್ಟದ ಕಲಾವಿದರುಗಳ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಮೂರು ದಿನಗಳ ಕಾಲ ಜರುಗಲಿರುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಉಪಮುಖ್ಯಂಮತ್ರಿಗಳು, ಸಚಿವರುಗಳು ಆಗಮಿಸುವ ನೀರಿಕ್ಷೆಯಿದೆ ಎಂದರು.

ಕಾರ್ಯಕ್ರಮದ‌ ಮುಖ್ಯ ವೇದಿಕೆ, ಸಮಾನಂತರ ವೇದಿಕೆ, ಆಸನಗಳ ವ್ಯವಸ್ಥೆ, ಮಾಧ್ಯಮ ಕೇಂದ್ರ, ಮೆರವಣಿಗೆ ಮಾರ್ಗ ಸೇರಿದಂತೆ ಇತರೆ ಸಿದ್ದತೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಉತ್ಸವದ ಅದ್ದೂರಿ ಆಚರಣೆಗಾಗಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯತ್ಸವವನ್ನು ಯಶಸ್ವಿಗೊಳಿಸಲು ಮನವಿ‌ ಮಾಡಿದರು.

ಚನ್ನಮ್ಮನ ಕಿತ್ತೂರ ಶಾಸಕರಾದ ಬಾಬಾಸಾಹೇಬ್ ಪಾಟೀಲ ಅವರು, ಮಾತನಾಡಿ ಉತ್ಸವದ ವಿಜೃಂಭಣೆ ಆಚರಣೆಗೆ ಎಲ್ಲ‌ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Edited By : Suman K
PublicNext

PublicNext

22/10/2024 07:40 pm

Cinque Terre

9.19 K

Cinque Terre

0

ಸಂಬಂಧಿತ ಸುದ್ದಿ