ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸಿ.ಪಿ. ಯೋಗೇಶ್ವರ್ ಬಿಜೆಪಿ ತೊರೆದ ನಂತರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ – ಡಿಕೆಶಿ

ಬೆಂಗಳೂರು : ಸಿಪಿ ಯೋಗೇಶ್ವರ್ ನಿನ್ನೆ ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಚರ್ಚೆ ಜೋರಾಗಿಯೇ ನಡೆಯುತ್ತಿದೆ. ಅಲ್ದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಸಿಪಿ ಯೋಗೇಶ್ವರ್ ಪಕ್ಷಕ್ಕೆ ಬಂದ್ರೆ ಸ್ವಾಗತ ಎಂದು ಹೇಳಿದ್ದಾರೆ.

ಇನ್ನೂ ಈ ವಿಚಾರವಾಗಿ ಮಾತನಾಡಿರುವ ಡಿಸಿಎಂ ಡಿಕೆಶಿ “ಈ ವಿಚಾರ ನನಗೆ ಗೊತ್ತಿಲ್ಲ. ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ಓದಿದ್ದೇನೆ. ಚನ್ನಪಟ್ಟಣದಲ್ಲಿ ಇಂದು ಸಭೆ ನಡೆಸುತ್ತಿದ್ದಾರೆ ಎಂದು ನಮ್ಮ ಮುಖಂಡರು ಕರೆ ಮಾಡಿ ತಿಳಿಸಿದರು. ಬಿಜೆಪಿಯವರು ಕೂಡ ಯೋಗೇಶ್ವರ್ ಅವರ ಜೊತೆ ಚರ್ಚೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಅವರು ಬಿಜೆಪಿ ಬಿಟ್ಟ ನಂತರ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇನೆ. ಈಗ ಅವರು ಬಿಜೆಪಿಯಲ್ಲೇ ಇದ್ದಾರೆ, ಬಿಜೆಪಿಯಲ್ಲಿರುವವರ ಬಗ್ಗೆ ನಾನೇಕೆ ಮಾತನಾಡಲಿ ಎಂದು ತಿಳಿಸಿದರು.

Edited By : Vinayak Patil
PublicNext

PublicNext

22/10/2024 08:18 pm

Cinque Terre

7.22 K

Cinque Terre

0

ಸಂಬಂಧಿತ ಸುದ್ದಿ