ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರದಲ್ಲಿ ರೈತರಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮುತ್ತಿಗೆ ಹಾಕಲು ಯತ್ನ!

ಸಾಗರ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ರೈತರಿಂದ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಸಾಗರದ ಉಪ ವಿಭಾಗಾಧಿಕಾರಿ ಕಚೇರಿಯ ಎದುರು ಮಂಗಳವಾರ ನಡೆದಿದೆ.

ಮಲೆನಾಡಿನ ಭಾಗದ ರೈತರು ಹಾಗೂ ಮುಳುಗಡೆ ಸಂತ್ರಸ್ಥರು ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಡಾ. ಎಚ್.ಗಣಪತಿಯಪ್ಪ ಸ್ಥಾಪಿತ ಜಿಲ್ಲಾ ರೈತ ಸಂಘ ಮತ್ತು ಮಲೆನಾಡು ರೈತರ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಬೃಹತ್ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಸಾಗರದ ಉಪ ವಿಭಾಗಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿದ್ದು ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ.

ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರವರ ಪರವಾಗಿ ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್ . ಹೇಮಂತ್ ರವರು ಧರಣಿ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿ ಸಾಗರ ಉಪ ವಿಭಾಗಾಧಿಕಾರಿ ಯತೀಶ್ ಅರ್, ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯ್ಕ್ ಹಾಗೂ ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ಮತ್ತು ರೈತ ಮುಖಂಡರ ಜೊತೆ ಚರ್ಚೆ ನಡೆಸಿದ್ದು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಭರವಸೆಗಳಿಗೆ ಸ್ವಾಗತ ಮಾಡದೆ ರೈತ ಮುಖಂಡರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಂತರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಹೇಮಂತ್ ರವರಿಗೆ ಕಚೇರಿಯ ಒಳಗೆ ಇಟ್ಟು ದಿಗ್ಬಂಧನ ಮಾಡಲಾಯಿತು. ಕೆಲವು ಗಂಟೆಗಳ ನಂತರ ಬೀಗಿ ಪೋಲಿಸ್ ಬಂದೋಬಸ್ತ್ ನಲ್ಲಿ ಎ.ಸಿ ಕಛೇರಿಯ ಅವರಣದಿಂದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೋಗುವ ಸಂದರ್ಭದಲ್ಲಿ ರೈತರು ಮುತ್ತಿಗೆ ಹಾಕಲು ಪ್ರಯತ್ನಿಸಿದರು.

ಒಟ್ಟಾರೆ ಕೆಲವು ಗಂಟೆಗಳ ಕಾಲ ಉಪ ವಿಭಾಗಾಧಿಕಾರಿಗಳ ಕಚೇರಿಯ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಸುಳ್ಳಲ್ಲ.

Edited By : Suman K
Kshetra Samachara

Kshetra Samachara

22/10/2024 08:30 pm

Cinque Terre

680

Cinque Terre

0

ಸಂಬಂಧಿತ ಸುದ್ದಿ