ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಚಿವ ಸಂತೋಷ ಲಾಡ್ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ - ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ

ಧಾರವಾಡ: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧ್ಯಕ್ಷತೆಯಲ್ಲಿ ಧಾರವಾಡ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಕೆಡಿಪಿ ಸಭೆ ನಡೆಯಿತು.

ಈ ಕೆಡಿಪಿ ಸಭೆಯಲ್ಲಿ ಕೃಷಿ, ನೀರಾವರಿ, ಶಿಕ್ಷಣ, ಆರೋಗ್ಯ, ಸಣ್ಣ ನೀರಾವರಿ, ತೋಟಗಾರಿಕೆ ಸೇರಿದಂತೆ ಇತ್ಯಾದಿ ಇಲಾಖೆಗಳ ಪ್ರಗತಿಯನ್ನು ಸಚಿವರು ಪರಿಶೀಲನೆ ನಡೆಸಿದರು.

ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಧಾರವಾಡ ಜಿಲ್ಲೆಯ ಯಾವ್ಯಾವ ಭಾಗದಲ್ಲಿ ಹೆಚ್ಚಿನ ಮಳೆಯಾಗಿ ಜನ, ಜೀವನ ಅಸ್ತವ್ಯಸ್ಥಗೊಂಡಿದೆ, ಎಲ್ಲೆಲ್ಲಿ ದೊಡ್ಡ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ ಎಂಬುದರ ಕುರಿತು ಸಚಿವರು ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದುಕೊಂಡರು. ಇಂತಹ ಅತಿವೃಷ್ಟಿ ಸಮಯದಲ್ಲಿ ಸಂಬಂಧಿಸಿದ ಅಧಿಕಾರಿಗಳು ಮೇಲಾಧಿಕಾರಿಗಳ ಪೂರ್ವಾನುಮತಿ ಇಲ್ಲದೇ ಜಿಲ್ಲೆ ಬಿಟ್ಟು ಹೋಗುವಂತಿಲ್ಲ. ಜನರಿಗೆ ತೊಂದರೆಯುಂಟಾದಾಗ ಶೀಘ್ರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಸಚಿವರು ತಾಕೀತು ಮಾಡಿದರು.

ಧಾರವಾಡ ಜಿಲ್ಲೆಯ ನವಲಗುಂದ, ಅಳ್ನಾವರ ಭಾಗದಲ್ಲಿ ಮಳೆಯಿಂದ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದ್ದರ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು.

ಸಭೆಯಲ್ಲಿ ಕುಂದಗೋಳ ಶಾಸಕ ಎಂ.ಆರ್.ಪಾಟೀಲ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಜಿಪಂ ಸಿಇಒ ಸ್ವರೂಪಾ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

Edited By : Suman K
Kshetra Samachara

Kshetra Samachara

22/10/2024 08:37 pm

Cinque Terre

6.12 K

Cinque Terre

0

ಸಂಬಂಧಿತ ಸುದ್ದಿ