ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಜಾತಿ ಗಣತಿ ಒಪ್ಪದಿರಲು ವೀರಶೈವ ಲಿಂಗಾಯತ ಮಹಾಸಭಾ ತೀರ್ಮಾನ

ಬೆಂಗಳೂರು : ರಾಜ್ಯ ಸರ್ಕಾರದ ಜಾತಿಗಣತಿ ವರದಿ ಒಪ್ಪದಿರಲು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತೀರ್ಮಾನ ಕೈಗೊಂಡಿದೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನೀಡಿರುವ ಕಾಂತರಾಜ್ ವರದಿಯ (ಜಾತಿ ಗಣತಿ) ಸಾಧಕ ಬಾದಕಗಳ ಕುರಿತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ವತಿಯಿಂದ ಇಂದು ಸಂಜೆ ಬೆಂಗಳೂರಿನ ಖಾಸಗಿ ಹೊಟೆಲ್ ನಲ್ಲಿ ಸಮಾಲೋಚನಾ ಸಭೆ ನಡೆಯಿತು.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ, ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ರಾಜ್ಯಾಧ್ಯಕ್ಷ ಶಂಕರ ಬಿದರಿ, ಸಚಿವರಾದ ಈಶ್ವರ್ ಖಂಡ್ರೆ, ಶರಣ ಬಸಪ್ಪ ದರ್ಶನಾಪುರ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯದ ಅನೇಕ ಮುಖಂಡರು ಪಾಲ್ಗೊಂಡಿದ್ದರು.

ಸಭೆಯಲ್ಲಿ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಗೆ ವಿರೋಧಿಸಿ ನಿರ್ಣಯ ತಗೆದುಕೊಳ್ಳಲಾಗಿದೆ.

10 ವರ್ಷಗಳ ಹಿಂದೆ ನಡೆಸಲಾದ ಈ ವರದಿಯಲ್ಲಿ ಹಲವು ಲೋಪಗಳಿಂದ ಕೂಡಿದ್ದು, ಇದನ್ನು ಸರಿಪಡಿಸುವ ಅಗತ್ಯವಿದೆ. ಹೀಗಾಗಿ ಹೊಸದಾಗಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕು ಎನ್ನುವುದೂ ಸೇರಿದಂತೆ ಐದು ಪ್ರಮುಖ ನಿರ್ಣಯಗಳನ್ನ ಮಹಾಸಭಾ ಕೈಗೊಂಡಿದೆ.

Edited By : Abhishek Kamoji
PublicNext

PublicNext

22/10/2024 10:36 pm

Cinque Terre

13.92 K

Cinque Terre

0

ಸಂಬಂಧಿತ ಸುದ್ದಿ