ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಅಗಸಿಹೊಂಡದಲ್ಲಿ ವ್ಯಕ್ತಿ ಮುಳುಗಡೆ, ಅಗ್ನಿಶಾಮಕ ದಳ ಕಾರ್ಯಾಚರಣೆ

ಕುಂದಗೋಳ : ಅಗಸಿ ಹೊಂಡದಲ್ಲಿ ಈಜಲು ತೆರಳಿದ್ದ ವ್ಯಕ್ತಿಯೋರ್ವ ಮುಳುಗಿದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳದ ಅಧಿಕಾರಿಗಳು ವ್ಯಕ್ತಿಯ ಶವ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಹೌದು ! ಕುಂದಗೋಳ ಪಟ್ಟಣದ ಅಗಸಿ ಹೊಂಡದಲ್ಲಿ ನಿನ್ನೆ ಸೋಮವಾರ ನಡೆದ ತೆಪ್ಪದ ರಥೋತ್ಸವದ ವೇಳೆ ಈಜಾಟ ನಡೆಸಿದ್ದ ವ್ಯಕ್ತಿಯೋರ್ವ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಈ ಘಟನೆ ಬಳಿಕ ಅಗ್ನಿಶಾಮಕ ದಳಕ್ಕೆ ಸ್ಥಳೀಯರು ವಿಷಯ ತಿಳಿಸಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಅಧಿಕಾರಿಗಳು ಶವ ಶೋಧ ಕಾರ್ಯಾಚರಣೆ ನಡೆಸಿ ರಾತ್ರಿ ವೇಳೆ ಸ್ಥಗಿತ ಗೊಳಿಸಿದ್ದರು.

ಬಳಿಕ ಇಂದು ಬೆಳಿಗ್ಗೆ 7 ಗಂಟೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದಾರೆ. ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ, ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಸೇರಿದಂತೆ ಹೊಂಡದ ಸುತ್ತ ಜನಸಂದಣಿ ಸೇರಿದೆ.

ಶ್ರೀಧರ ಪೂಜಾರ ಪಬ್ಲಿಕ್ ನೆಕ್ಸ್ಟ್

Edited By : Somashekar
Kshetra Samachara

Kshetra Samachara

29/10/2024 04:47 pm

Cinque Terre

30.03 K

Cinque Terre

0

ಸಂಬಂಧಿತ ಸುದ್ದಿ