ಚಿಕ್ಕಮಗಳೂರು : ಜಿಲ್ಲೆಯ ಕಾಫಿ ಬೆಳೆಗಾರರ ಸಮಸ್ಯೆಗಳು ಹಾಗೂ ಕಾಫಿ ತೋಟಗಳಲ್ಲಿ ಕೆಲಸ ಅರಸಿ ಬರುತ್ತಿರುವ ಹೊರ ರಾಜ್ಯಗಳ ಕಾರ್ಮಿಕರ ಕುರಿತು ಬೆಳಗಾರರೊಂದಿಗೆ ಮುಕ್ತವಾಗಿ ಚರ್ಚಿಸಲು ಬುಧವಾರ (ನವೆಂಬರ್ 6 ರಂದು) ನಗರದ ಎಐಟಿ ವೃತ್ತದ ಒಕ್ಕಲಿಗರ ಸಮುದಾಯ ಭವನದಲ್ಲಿ ಸಭೆಯನ್ನು ಆಯೋಜಿಸಿದ್ದು. ಈ ಸಭೆಯಲ್ಲಿ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಭಾಗವಹಿಸಿ ಕಾಫಿ ಬೆಳೆಗಾರರೊಂದಿಗೆ ಚರ್ಚೆ ನಡೆಸಲಿದ್ದಾರೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಕಾಫಿ ಬೆಳೆಗಾರರು ಭಾಗವಹಿಸಬೇಕೆಂದು ಕಾಫಿ ಮಂಡಳಿ, ಹಾಗೂ ಕಾಫಿ ಬೆಳೆಗಾರರ ಸಂಘ ಆಹ್ವಾನಿಸಿದೆ.
Kshetra Samachara
04/11/2024 06:12 pm