ಚಿಕ್ಕಮಗಳೂರು: ದಲಿತ ಯುವಕನೋರ್ವನ ಮೇಲೆ ಇಬ್ಬರು ಮುಸ್ಲಿಂ ಯುವಕರು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಚಿಕ್ಕಮಗಳೂರು ತಾಲೂಕಿನ ಅತ್ತಿಗುಂಡಿ ಸಮೀಪ ಸತ್ಯಪ್ರಕಾಶ್ ಎಂಬುವವರು ಪ್ರವಾಸಿಗರನ್ನು ಬಾಡಿಗೆಗೆಂದು ಜೀಪಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಮಹಮದ್ ಶಾದಬ್ ಹಾಗೂ ಮಹಮ್ಮದ್ ಇಬ್ರಾಹಿಂ ಎಂಬುವರು ಜೀಪನ್ನು ಅಡ್ಡ ಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀಪಿನಲ್ಲಿ ಬಾಡಿಗೆ ಮಾಡದಂತೆ ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಜೀಪ್ ಚಾಲಕ ಸತ್ಯಪ್ರಕಾಶ್ ಆರೋಪಿಸಿದ್ದಾರೆ.
ಇನ್ನು ದಲಿತ ಸಮುದಾಯಕ್ಕೆ ರಕ್ಷಣೆಯೇ ಇಲ್ಲದಂತಾಗಿದ್ದು, ಇತ್ತೀಚಿನ ದಿನಗಳಲ್ಲಿ ದಲಿತರ ವಿರುದ್ಧ ನಿರಂತರವಾಗಿ ಹಲ್ಲೆ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ರಾಜ್ಯ ಸರ್ಕಾರ ಹಾಗೂ ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ ಎಸ್ಸಿ ಘಟಕದ ಕಾರ್ಯಕರ್ತರು ಚಿಕ್ಕಮಗಳೂರು ಎಸ್ಪಿ ವಿಕ್ರಮ ಅಮಟೆ ಆವರ ಬಳಿ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ್ದಾರೆ.
Kshetra Samachara
04/11/2024 07:54 pm