ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯರ ಜೊತೆ ಅನುಚಿತವಾಗಿ ವರ್ತಿಸಿದಕ್ಕೆ ಸಾರ್ವಜನಿಕರು ಹಿಗ್ಗಾಮುಗ್ಗಾ ಹೊಡೆದು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಅಲ್ಲಾಭಕ್ಷ ಖಾದೀಮ ನವರನ್ನು ಕೇಶ್ವಾಪುರ ಪೊಲೀಸ್ ಠಾಣೆಗೆ ಒಪ್ಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಡ್ ಕಾನ್ಸ್ಟೇಬಲ್‌ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯನ್ನು ಮಾಡಿಕೊಂಡಿದ್ದ ದಕ್ಷಿಣ ಸಂಚಾರಿ ಠಾಣೆಯ ಹೆಡ್ ಕಾನ್ಸ್ಟೇಬಲ್ ಅಲ್ಲಾಭಕ್ಷ ತಾನು ವಾಸವಿದ್ದ ಏರಿಯಾದಲ್ಲಿ ಅಪ್ರಾಪ್ತ ಬಾಲಕಿಯರ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದ, ಹೀಗಾಗಿ ಸಾರ್ವಜನಿಕರು ಆತನನ್ನು ಇಂದು ಬೆಳ್ಳಿಗ್ಗೆ ಹಿಗ್ಗಾಮುಗ್ಗಾ ಥಳಿಸಿ ಕೇಶ್ವಾಪುರ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು.
ಆರೋಪಿ ವಿರುದ್ಧ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿ ಆತನನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿದಾಗ ಅಲ್ಲಾಭಕ್ಷನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಒಬ್ಬ ಸರ್ಕಾರಿ ನೌಕರ 24 ಗಂಟೆಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ರೆ, ಆತನನ್ನು ಅಮಾನತು ಮಾಡಲಾಗುತ್ತದೆ. ಹೀಗಾಗಿ ಪಬ್ಲಿಕ್ ನೆಕ್ಸ್ಟ್‌ಗೆ ಸಿಕ್ಕ ಮಾಹಿತಿ ಪ್ರಕಾರ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಹೆಡ್ ಕಾನ್ಸ್ಟೇಬಲ್ ನನ್ನು ಅವಳಿ ನಗರದ ಕಮಿಷನರ್ ಎನ್ ಶಶಿಕುಮಾರ್ ಈಗಾಗಲೇ ಅಮಾನತುಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ವಿನಯ ರೆಡ್ಡಿ ಕ್ರೈಂ ಬ್ಯುರೋ ಪಬ್ಲಿಕ್ ನೆಕ್ಸ್ಟ್
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
04/11/2024 10:56 pm