ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬಾರ್‌ಗಳಿಗೆ ಹೊಸದಾಗಿ ಲೈಸೆನ್ಸ್ ನೀಡಲು ಸರ್ಕಾರ ಯೋಚಿಸಿದೆ - ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ

ಹುಬ್ಬಳ್ಳಿ: ಹೊಸದಾಗಿ ಮದ್ಯದಂಗಡಿಗಳಿಗೆ ಲೈಸನ್ಸ್ ನೀಡುವ ಬಗ್ಗೆ ಸರ್ಕಾರ ಯೋಚಿಸಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯವನ್ನು ಸಿಎಂ ಅವರ ಗಮನಕ್ಕೆ ತಂದಿಲ್ಲ. ಅವರ ಗಮನಕ್ಕೆ ತಂದು ಮುಂದಿನ ಹೆಜ್ಜೆ ಇಡಲಾಗುವುದು ಎಂದರು.

ಅಬಕಾರಿ ಇಲಾಖೆಯಲ್ಲಿ ಯಾವುದೇ ವರ್ಗಾವಣೆ ಮಾಡಿಲ್ಲ. ಸಹಜವಾಗಿ ಅಧಿಕಾರಿಗಳಿಗೆ ಬಡ್ತಿ ನೀಡಿದ್ದೇವೆ. "ನೋ ಟ್ರಾನ್ಸ್‌ಫರ್ ನಥಿಂಗ್" ಎಂದರು.

ವರ್ಗಾವಣೆ ವಿಷಯದಲ್ಲಿ ಕೋಟ್ಯಾಂತರ ರೂಪಾಯಿ ಹಣ ಪಡೆಯಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ನಾನು ಕೋಟ್ಯಾಂತರ ರೂಪಾಯಿ ಹಣ ನೋಡಿಲ್ಲ. ಯಾರಾದರೂ ಇದ್ದರೇ ತೋರಿಸಿ ಎಂದು ಸವಾಲ್ ಹಾಕಿದರು.

Edited By : Suman K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

05/11/2024 12:36 pm

Cinque Terre

23.65 K

Cinque Terre

4

ಸಂಬಂಧಿತ ಸುದ್ದಿ