ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಒಡಿಶಾ ರೈಲಿನಲ್ಲಿ ಅಪರಿಚಿತರಿಂದ ಗುಂಡಿನ ದಾಳಿ

ಭುವನೇಶ್ವರ್ : ಒಡಿಶಾದ ಭದ್ರಕ್ ಜಿಲ್ಲೆಯಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಮಂಗಳವಾರ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆ ಚರಂಪಾ ಸ್ಟೇಷನ್ ಬಳಿ ನಡೆದಿದೆ. ರೈಲು ಬೆಳಗ್ಗೆ 9:25 ರ ಸುಮಾರಿಗೆ ಭದ್ರಕ್ ನಿಲ್ದಾಣ ದಿಂದ ಹೊರಟ ವೇಳೆ ಐದು ನಿಮಿಷಗಳ ಕಾಲ ಗುಂಡಿನ ದಾಳಿ ನಡೆದಿದೆ.

ಘಟನೆಯಲ್ಲಿ ಯಾವುದೇ ಗಾಯಗಳು ವರದಿಯಾಗಿಲ್ಲ. ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಲು ಜಿಆರ್‌ಪಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಸಿಬ್ಬಂದಿ ನಂದನ್ ಕಾನನ್ ಎಕ್ಸ್‌ಪ್ರೆಸ್‌ಗೆ ಭದ್ರತೆ ಒದಗಿಸಿದ್ದಾರೆ.

Edited By :
PublicNext

PublicNext

05/11/2024 07:57 pm

Cinque Terre

19.13 K

Cinque Terre

1

ಸಂಬಂಧಿತ ಸುದ್ದಿ