ಚಿಕ್ಕಮಗಳೂರು : ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಐಕ್ಯತಾ ಮನೋಭಾವ ವೃದ್ಧಿಯಾಗುವುದರೊಂದಿಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯವು ಸುಸ್ಥಿತಿಯಲ್ಲಿರುತ್ತದೆ ಎಂದು ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಹಾಗೂ ತಾಲ್ಲೂಕು ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಇಂದು ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಅಥ್ಲೆಟಿಕ್ಸ್ ಕ್ರೀಡಾ ಕೂಟ ಮತ್ತು ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಶೇಷ ಚೇತನ 14 ರಿಂದ 17 ವಯೋಮಾನ ಮಕ್ಕಳ 2024-25ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಂದು ಮಗುವಿಗೂ ಶಿಕ್ಷಣ ಕೊಡಿಸುವುದು ಬಹುಮುಖ್ಯವಾಗಿದೆ. ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರ ಅಭ್ಯಾಸದ ಜೊತೆಗೆ ಶಿಕ್ಷಣದ ಪೂರಕ ಚಟುವಟಿಕೆಗಳಾದ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಕ್ಕಳು ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸುವುದು ಶಿಕ್ಷಕರ ಕರ್ತವ್ಯ ಎಂದರು.
Kshetra Samachara
05/11/2024 08:29 pm