ಮೈಸೂರು: ಮುಡಾ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಇಂದು (ನವೆಂಬರ್ 6) ಬೆಳಗ್ಗೆ 10 ಗಂಟೆಗೆ ಲೋಕಾಯುಕ್ತ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ಹಗರಣದ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆ ಎದುರಿಸಲಿದ್ದಾರೆ.
ಈ ಮೂಲಕ 40 ವರ್ಷಗಳ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ವಿಚಾರಣೆಗೆ ನೋಟಿಸ್ ನೀಡಲಾಗಿದೆ. ಹಾಗಾಗಿ ಇಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
PublicNext
06/11/2024 09:28 am