ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಇ.ಡಿ ದುರ್ಬಳಕೆ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಪ್ರಗತಿಪರರು ಮುಂದಾಗಿದ್ದಾರೆ.
ನಾಳೆ ಸಿಎಂ ಸಿದ್ದರಾಮಯ್ಯ ಪರವಾಗಿ ದೆಹಲಿಯಲ್ಲಿ ಹೋರಾಟ ನಡೆಸಲು ನಿರ್ಧರಿಸಿದ್ದಾರೆ.ನಾಳೆ ಬೆಳಗ್ಗೆ ದೆಹಲಿಯಲ್ಲಿ ಕರ್ನಾಟಕ ಸಂಘದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಪ್ರತಿಭಟನಾ ಸಭೆ ನಡೆಯಲಿದೆ.
ಪ್ರತಿಭಟನೆಯಲ್ಲಿ ಪ್ರೊ.ಎಸ್.ಜಿ ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಜಾಣಗೆರೆ ವೆಂಕಟರಾಮಯ್ಯ, ಕಾಳೇಗೌಡ ನಾಗವಾರ, ಎಲ್. ಹನುಮಂತಯ್ಯ ಸೇರಿದಂತೆ ಹಲ ಪ್ರಗತಿಪರರು ಭಾಗಿಯಾಗಲಿದ್ದಾರೆ. ಕೇಂದ್ರ ಸರ್ಕಾರ ಸಿಎಂ ವಿರುದ್ಧ ಇಡಿ,ಐಟಿ ಮತ್ತು ಸಿಬಿಐ ಅಧಿಕಾರಿಗಳನ್ನ ಬಳಸಿಕೊಂಡು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿರೋಧಿಸಿ ನಾಳೆ ಪ್ರತಿಭಟನಾ ಸಭೆ ನಡೆಸಲಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಪ್ರಗತಿಪರ ಸಾಹಿತಿಗಳು ನಿಂತಿದ್ದಾರೆ.
PublicNext
06/11/2024 12:37 pm