ಹುಬ್ಬಳ್ಳಿ: ಪ್ರೀತಿಸಿದ ಯುವಕನ ಹಿಂದೆ ಬಂದಿರುವ ಯುವತಿಗೆ ಆಕೆಯ ಕುಟುಂಬಸ್ಥರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಹುಬ್ಬಳ್ಳಿ ಲ್ಯಾಮಿಂಗ್ಟನ್ ರಸ್ತೆ, ಕಾರ್ಪೊರೇಷನ್ ಬಸ್ ನಿಲ್ದಾಣದ ಪಕ್ಕದಲ್ಲಿ ನಡೆದಿದೆ.
ಹೌದು,,, ಪ್ರಿಯಕರನೊಂದಿಗೆ ಬಂದಿದ್ದ ಯುವತಿ ನಿಂತಿರೋದನ್ನ ನೋಡಿ, ಜಗಳ ತಗೆದ ಯುವತಿಯ ತಾಯಿ, ಮತ್ತು ತಾಯಿಯ ಸಹೋದರ ಇಬ್ಬರೂ ಪ್ರೇಮಿಗಳಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಮನೆಗೆ ಬಾ ಮಾತಾಡೋಣ ಎಂದು ಕರೆದಿದ್ದಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ಯುವತಿಯ ತಾಯಿಯ ಸಹೋದರ ಇಬ್ಬರಿಗೂ ಇಟ್ಟಿಗೆಯಿಂದ ಹಲ್ಲೆ ಮಾಡಿದ್ದಾರೆ.
ಈ ಘಟನೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳೀಯರು ಜಗಳ ಬಿಡಿಸಿ ಕಳಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
06/11/2024 12:44 pm