ನವಲಗುಂದ: ಈಗಿನ ವೇಗವಾಗಿ ಬೆಳೆಯುತ್ತಿರುವ ಯುಗದಲ್ಲಿ ಮಕ್ಕಳ ಮೂಲಕ ಹಳೇಯ ಹಳ್ಳಿಯ ಪರಂಪರೆಯನ್ನು ತೋರಿಸುವದು ಸಾಮಾನ್ಯವಲ್ಲ. ಪ್ರಯತ್ನ ಮಾಡಿದ ಶಾಲಾ ಸಿಬ್ಬಂದಿಗೆ ಹಾಗೂ ಪಾಲಕರಿಗೆ ಕೃತಜ್ಞತೆ ಮತ್ತು ಇದನ್ನು ಎಲ್ಲರೂ ಅಳವಡಿಸಿ ಕೊಳ್ಳಬೇಕೆಂಬುದು ನನ್ನ ಆಸೆ ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು.
ಅವರು ವಿಧಾನಸಭಾ ವ್ಯಾಪ್ತಿಯ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಪಿ.ಎಂ ಶ್ರೀ ಹಾಗೂ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ 2024-25 ನೇ ಸಾಲಿನ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಡೊಳ್ಳು ಬಾರಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರು ಇದ್ದರು.
Kshetra Samachara
06/11/2024 12:55 pm