ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ತಾಯಂದಿರು ಸರಕಾರಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲಿ

ನವಲಗುಂದ: ಸರಕಾರವು ಹೆಣ್ಣು ಮಕ್ಕಳನ್ನು ಉತ್ತೇಜಿಸಲು ಪ್ರಧಾನ ಮಂತ್ರಿ ಮಾತೃ ವಂದನಾ, ಮಡಿಲು ಕಿಟ್ಟು, ನಗು ಮಗು, ಭಾಗ್ಯಲಕ್ಷ್ಮೀ, ಸುಕನ್ಯಾ ಸಮೃದ್ಧಿ ಯೋಜನೆ, ಬೇಟಿ ಬಚಾವೋ ಬೇಟಿ ಪಡಾವೋ ಹೀಗೆ ಹಲವಾರು ಯೋಜನೆಗಳನ್ನು ನೀಡಿದ್ದು ತಾಯಂದಿರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಿರಿಯ ದಿವಾಣಿ ನ್ಯಾಯಾಧಿಶರಾದ ಮಂಜುನಾಥ ಪಾನಘಂಟಿ ಅವರು ಸಲಹೆ ನೀಡಿದರು.

ಪಟ್ಟಣದ ತಾಲೂಕಾ ಆಸ್ಪತ್ರೆಯಲ್ಲಿ ಶಿಶು ಅಭಿವೃದ್ಧಿ ಯೋಜನೆ, ತಾಲೂಕಾ ಕಾನೂನು ಸೇವಾ ಸಮೀತಿ ಹಾಗೂ ತಾಲೂಕಾ ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿ ನ.5 ರಂದು ಜನಿಸಿದ ಹೆಣ್ಣು ಮಕ್ಕಳ ತಾಯಂದಿರಿಗೆ ಪ್ರೋತ್ಸಾಹ ನೀಡಲು ಹಾಗೂ ಅವರ ರಕ್ಷಣೆ ಮತ್ತು ಶಿಕ್ಷಣಕ್ಕೆ ಉತ್ತೇಜನ ನೀಡಲು ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಮುಖ್ಯ ಅಥಿತಿಗಳಾಗಿ ದಿವಾಣಿ ನ್ಯಾಯಾಧೀಶರಾದ ನವೀನ ಡಿಸೋಜಾ ಹೆಣ್ಣು ಮತ್ತು ಗಂಡು ಎಂಬ ತಾರತಮ್ಯ ಮಾಡದೆ ಸಮಾನ ಅವಕಾಶ ನೀಡಿ ಎಲ್ಲಾ ಕ್ಷೇತ್ರದಲ್ಲಿ ಬೆಳಸುವಂತೆ ಸಲಹೆ ನೀಡಿದರು.

ಇದೆ ವೇಳೆ ಹೆಣ್ಣು ಮಕ್ಕಳ ತಾಯಂದಿರಿಗೆ ಸಿಹಿ ಹಾಗೂ ತೆಂಗಿನ ಸಸಿಯನ್ನು ನೀಡಿ ಅಭಿನಂದಿಸಲಾಯಿತು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿದೇವಿ ಪಾಟೀಲ, ತಾಲ್ಲೂಕಾ ವೈದ್ಯಾಧಿಕಾರಿ ರೂಪಾ ಕಿಣಗಿ, ವಕೀಲರ ಸಂಘದ ಅಧ್ಯಕ್ಷ ಪಿ.ಹೆಚ್. ಕೋನರಡ್ಡಿ, ಸ್ತ್ರೀರೋಗ ತಜ್ಞರಾದ ಡಾ.ಬಿ.ಎಸ್. ಮಾಶಾ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಯರು ಮಕ್ಕಳ ತಾಯಂದಿರು, ಪೋಷಕರು, ಇಲಾಖೆಯ ಹಿರಿಯ ಮೇಲ್ವಿಚಾರಕರು ಭಾಗವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

06/11/2024 01:19 pm

Cinque Terre

12.7 K

Cinque Terre

0

ಸಂಬಂಧಿತ ಸುದ್ದಿ