ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡೊನಾಲ್ಡ್ ಟ್ರಂಪ್ ಗೆ 2ನೇ ಬಾರಿ ಅಮೆರಿಕ ಅಧ್ಯಕ್ಷ ಪಟ್ಟ : ಗೆಲುವು ಸಾಧಿಸಿದ ಗೆಳೆಯ ಟ್ರಂಪ್‌ ಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ :‌ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದು ಬೀಗಿದ ಡೋನಾಲ್ಡ್‌ ಟ್ರಂಪ್‌ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಟ್ರಂಪ್ ಗೆಲುವು ಖಚಿತವಾದರೆ ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ಒಟ್ಟಾಗಿ ಕೆಲಸ ಮಾಡುವಂತೆ ಅವರು ಮನವಿ ಮಾಡಿದರು.

ನನ್ನ ಸ್ನೇಹಿತ ಡೊನಾಲ್ಡ್ ಟ್ರಂಪ್ ಅವರ ಐತಿಹಾಸಿಕ ಚುನಾವಣಾ ಗೆಲುವಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನಿಮ್ಮ ಹಿಂದಿನ ಅಧಿಕಾರಾವಧಿಯ ಯಶಸ್ಸಿನ ಆಧಾರದ ಮೇಲೆ, ಭಾರತ-ಯುಎಸ್ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಮ್ಮ ಸಹಕಾರವನ್ನು ನವೀಕರಿಸಲು ನಾನು ಎದುರು ನೋಡುತ್ತಿದ್ದೇನೆ , ನಮ್ಮ ಜನರ ಒಳಿತಿಗಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ ಎಂದು ಮೋದಿ ತಿಳಿಸಿದ್ದಾರೆ.

ಕಳೆದ ಎರಡು ತಿಂಗಳಿಂದ ನಡೆಯುತ್ತಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗೆದ್ದು ಬೀಗಿದ್ದಾರೆ. 270 ಸ್ಥಾನಗಳು ಗೆಲ್ಲಲು ಬೇಕಾಗಿದ್ದು ಟ್ರಂಪ್‌ ಸುಲಭವಾಗಿ 268 ಸ್ಥಾನಗಳಲ್ಲಿ ಬಹುಮತ ಸಾಧಿಸಿದ್ದಾರೆ. ತೀವ್ರ ಹಣಾಹಣಿ ಹೋರಾಟ ನಡೆಸಿದ ಕಮಲಾ ಹ್ಯಾರಿಸ್‌ 214 ಸ್ಥಾನಗಳಿಗಷ್ಟೇ ತೃಪ್ತಿ ಪಟ್ಟುಕೊಂಡಿದ್ದಾರೆ.

Edited By :
PublicNext

PublicNext

06/11/2024 03:08 pm

Cinque Terre

9.19 K

Cinque Terre

1

ಸಂಬಂಧಿತ ಸುದ್ದಿ