ಧಾರವಾಡ: ಕೇಂದ್ರ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಕೇಂದ್ರ ಸರ್ಕಾರದ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ಸಿಎಂ ಸಿದ್ದರಾಮಯ್ಯ ಅವರ ಮೇಲೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ದೊಡ್ಡ ಷಡ್ಯಂತ್ರ ಮಾಡುತ್ತಿವೆ. ಕೇಂದ್ರದ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಸಿಎಂ ಸಿದ್ದರಾಮಯ್ಯ ಅವರ ಮೇಲೆ ವಿನಾಕಾರಣ ಆರೋಪಗಳನ್ನು ಮಾಡುತ್ತಿವೆ. ಸಿದ್ದರಾಮಯ್ಯನವರ ರಾಜೀನಾಮೆ ಕೇಳುವುದು ಸರಿಯಲ್ಲ ಎಂದು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
06/11/2024 04:20 pm