ನವದೆಹಲಿ : ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಯ ನೂತನ ಕಾರ್ಯದರ್ಶಿಯಾಗಿ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿಯವರ ಪುತ್ರ, ರೋಹನ್ ಜೇಟ್ಲಿ ಆಯ್ಕೆಯಾಗುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ.
ರೋಹನ್ ಜೇಟ್ಲಿ ಅವರು ಜಯ್ ಶಾ ಸ್ಥಾನವನ್ನು ಅಲಂಕರಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಬಿಸಿಸಿಐ ಕಾರ್ಯದರ್ಶಿ ಯಾಗಿದ್ದ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಐಸಿಸಿ ಅಧ್ಯಕ್ಷರಾಗಿ ಡಿ.1 ರಿಂದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಹೀಗಾಗಿ ಕಾರ್ಯದರ್ಶಿ ಸ್ಥಾನಕ್ಕೆ ರೋಹನ್ ಜೇಟ್ಲಿ ಹೆಸರೇ ಅಂತಿಮಗೊಳ್ಳುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.
PublicNext
06/11/2024 04:41 pm