ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮದರಸಾ ಕಾಯ್ದೆ ಕಾನೂನು ಬದ್ಧ : ಉತ್ತರ ಪ್ರದೇಶದ ಮದರಸಾ ಕಾಯ್ದೆಯ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ : ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ–2004ರ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್‌, ಕಾಯ್ದೆಯು ಜಾತ್ಯತೀತ ತತ್ವವನ್ನು ಉಲ್ಲಂಘಿಸುವುದಿಲ್ಲ ಎಂದು ಮಂಗಳವಾರ ಮಹತ್ವದ ತೀರ್ಪು ನೀಡಿದೆ.

ಈ ಮೂಲಕ `ಮದರಸಾ ಕಾಯ್ದೆ ಸಂವಿಧಾನದ ಮೂಲ ಪರಿಕಲ್ಪನೆಯಾದ ಜಾತ್ಯತೀತ ತತ್ವಗಳ ಉಲ್ಲಂಘನೆ ಮಾಡುತ್ತದೆ. ಅದು ಅಸಾಂವಿಧಾನಿಕ' ಎಂಬ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ವಜಾ ಮಾಡಿದೆ. ಹೀಗಾಗಿ ಮುಚ್ಚುವ ಭೀತಿಯಲ್ಲಿದ್ದ ಉತ್ತರಪ್ರದೇಶದ 16000 ಮದರಸಾಗಳು ಮತ್ತು ಮದರಸಾಗಳಿಂದ ಸಾಮಾನ್ಯ ಶಿಕ್ಷಣಕ್ಕೆ ವರ್ಗಾವಣೆ ಆಗುವ ಸಾಧ್ಯತೆ ಎದುರಿಸುತ್ತಿದ್ದ 17 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

‘ಈ ಕಾಯ್ದೆಯು ಜಾತ್ಯತೀತ ತತ್ವವನ್ನು ಉಲ್ಲಂಘಿಸುತ್ತದೆ ಎಂಬ ಹೈಕೋರ್ಟ್‌ನ ನಿಲುವು ದೋಷದಿಂದ ಕೂಡಿದೆ’ ಎಂದು ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಹೇಳಿದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಹಾಗೂ ಮನೋಜ್‌ ಮಿಶ್ರಾ ಅವರೂ ಈ ಪೀಠದಲ್ಲಿದ್ದರು.

ತೀರ್ಪನ್ನು ಓದಿದ ಸಿಜೆಐ ಚಂದ್ರಚೂಡ್‌, ‘ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆಯ ಸಿಂಧುತ್ವವನ್ನು ನಾವು ಎತ್ತಿ ಹಿಡಿಯುತ್ತೇವೆ. ಸರ್ಕಾರಕ್ಕೆ ಶಾಸನಬದ್ಧ ಅಧಿಕಾರ ಇಲ್ಲದಿದ್ದಾಗ ಮಾತ್ರ ಇಂತಹ ಕಾಯ್ದೆಯನ್ನು ರದ್ದುಗೊಳಿಸಬಹುದು’ ಎಂದರು.

ಮದರಸಾಗಳನ್ನು ಮುಚ್ಚಿ, ಅಲ್ಲಿರುವ ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಗಳಿಗೆ ಸ್ಥಳಾಂತರ ಮಾಡುವಂತೆ ಹೈಕೋರ್ಟ್‌ ಆದೇಶಿಸಿತ್ತು. ಈಗ, ಸುಪ್ರೀಂ ಕೋರ್ಟ್‌ ತೀರ್ಪಿನಿಂದಾಗಿ ಉತ್ತರ ಪ್ರದೇಶದ ಮದರಸಾಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ನಿರಾಳರಾಗಿದ್ದಾರೆ.

ಅಲಹಾಬಾದ್‌ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಸುಪ್ರೀಂ ಕೋರ್ಟ್‌, ಅಕ್ಟೋಬರ್‌ 22ರಂದು ತನ್ನ ತೀರ್ಪು ಕಾಯ್ದಿರಿಸಿತ್ತು.

ಅಂಜುಮ್ ಖಾದ್ರಿ ಹಾಗೂ ಇತರರು ಈ ಕುರಿತು ಮೇಲ್ಮನವಿ ಸಲ್ಲಿಸಿದ್ದರು.

Edited By : Nirmala Aralikatti
PublicNext

PublicNext

06/11/2024 05:16 pm

Cinque Terre

9.03 K

Cinque Terre

1

ಸಂಬಂಧಿತ ಸುದ್ದಿ