ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಚಂದ್ರಶೇಖರ್ ದೂರಿನ ಹಿನ್ನೆಲೆ ಹೈಕೋರ್ಟ್ ನಿಂದ ಮಧ್ಯಂತರ ರಿಲೀಫ್ ನೀಡಲಾಗಿದೆ. ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ ನೀಡಿದೆ.
ಹೆಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸುರೇಶ್ ಬಾಬು ಅರ್ಜಿ ಸಲ್ಲಿಸಿದ್ದು, ವಿರೋಧ ಪಕ್ಷದಲ್ಲಿರುವುದರಿಂದ ದೌರ್ಜನ್ಯ ಮಾಡುತ್ತಿದ್ದಾರೆ. ಪೊಲೀಸರನ್ನು ಕಳಿಸಿ ಬಂಧಿಸಲು ಯತ್ನಿಸುತ್ತಿದ್ದಾರೆ. 10 ವರ್ಷದ ಹಿಂದಿನ ನಿರೀಕ್ಷಣಾ ಜಾಮೀನು ರದ್ದು ಮಾಡಲು ಪ್ರಯತ್ನ ನಡೆಸಿದ್ದಾರೆ ಎಂದು ಹೆಚ್.ಡಿ. ಕುಮಾರಸ್ವಾಮಿ ಪರ ವಕೀಲರು ವಾದ ಮಂಡಿಸಿದ್ದಾರೆ.
ಎಫ್ಐಆರ್ ಆಧರಿಸಿ ಹಳೆಯ ನಿರೀಕ್ಷಣಾ ಜಾಮೀನು ರದ್ದುಪಡಿಸುವಂತಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ನಿರ್ಬಂಧ ವಿಧಿಸಿದೆ. ಬಲವಂತದ ಕ್ರಮ ಕೈಗೊಳ್ಳುವುದಿಲ್ಲವೆಂದು ಎಸ್.ಪಿ.ಪಿ. ಹೇಳಿಕೆಯನ್ನು ಹೈಕೋರ್ಟ್ ದಾಖಲಿಸಿಕೊಂಡಿದೆ.
ಲೋಕಾಯುಕ್ತ ಎಸ್ಐಟಿ ಮುಖ್ಯಸ್ಥ, ಎಡಿಜಿಪಿ ಚಂದ್ರಶೇಖರ್ ಅವರಿಗೆ ಬೆದರಿಕೆ ಹಾಕಿದ ಮತ್ತು ಅವರ ವಿರುದ್ಧ ಸುಳ್ಳು ಆಪಾದನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಹೆಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.
PublicNext
06/11/2024 08:24 pm