ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಆಕ್ಷೇಪಣೆ ಸಲ್ಲಿಸಲು ಅವಕಾಶ

ಚಿಕ್ಕಮಗಳೂರು : ಕೊಪ್ಪ ತಾಲ್ಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವಿವಿಧ ವೃಂದದ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು, ಅದರಂತೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳ ವಿವರ ಮತ್ತು ದಾಖಲಾತಿಗಳ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ದಾಖಲಾತಿಗಳ ಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 11 ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಗೆ ಲಿಖಿತ ರೂಪದಲ್ಲಿ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
PublicNext

PublicNext

07/11/2024 07:54 pm

Cinque Terre

11.11 K

Cinque Terre

0

ಸಂಬಂಧಿತ ಸುದ್ದಿ