ಬೆಂಗಳೂರು : ವಕ್ಫ್ ಬೋರ್ಡ್ ನೋಟಿಸ್ ನೀಡಿದ್ದಕ್ಕೆ ರೈತ ರುದ್ರಪ್ಪ ಹಾವೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಫೋಸ್ಟ್ ಹಾಕಿದ್ದರು. ಈಗ ಫೋಸ್ಟ್ ಕುರಿತು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪಹಣಿಯಲ್ಲಿ ವಕ್ಫ್ ಎಂದು ನಮೂದಾದ ಹಿನ್ನೆಲೆ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಆದ್ರೆ ರೈತ ರುದ್ರಪ್ಪ ಸಾಲಬಾಧೆಗೆ ನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಇಲಾಖೆ ಹಾಗೂ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
PublicNext
08/11/2024 11:57 am