ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎತ್ತಿನಹೊಳೆ ಯೋಜನೆ ಕಾಮಗಾರಿ ಗುಂಡಿಗೆ ಬಿದ್ದು ಇಬ್ಬರು ಮಕ್ಕಳ ಸಾವು

ತುಮಕೂರು : ಜಿಲ್ಲೆಯ ತಿಪಟೂರು ತಾಲೂಕಿನ ಹುಚ್ಚನಹಟ್ಟಿ ಗ್ರಾಮದ ಸಮೀಪ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿ ಗುಂಡಿಗೆ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಎರಡನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಯದುವೀರ್, ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಮನೋಹರ್ ಮೃತ ದುರ್ದೈವಿಯಾಗಿದ್ದಾರೆ. ಈ ಇಬ್ಬರೂ ಗುರುವಾರ ಸಂಜೆ 7ಯಿಂದ ಕಾಣೆಯಾಗಿದ್ದರು. ಶುಕ್ರವಾರ ಬೆಳಗ್ಗೆ ಇಬ್ಬರ ಮೃತದೇಹ ಎತ್ತಿನಹೊಳೆ ಕಾಮಗಾರಿ ಮಾಡುತ್ತಿರುವ ಗುಂಡಿಯಲ್ಲಿ ಪತ್ತೆಯಾಗಿದೆ.

ಇದರಿಂದ ಆಕ್ರೋಶಗೊಂಡಿರುವ ಗ್ರಾಮಸ್ಥರು ಹಾಗೂ ಕುಟುಂಬದವರು ಸ್ಥಳದಲ್ಲಿಯೇ ಶವಗಳನ್ನು ಇಟ್ಟು ಪ್ರತಿಭಟನೆ ಮಾಡಿ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಸಂಬಂಧ ತಿಪಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
PublicNext

PublicNext

08/11/2024 12:56 pm

Cinque Terre

14.34 K

Cinque Terre

0