ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೊಲೀಸ್ ದೂರುಗಳ ಪ್ರಾಧಿಕಾರವು 2014 ರ ಅಕ್ಟೋಬರ್ 31 ರಂದು ರಚನೆಯಾಗಿದೆ. ಪ್ರಾಧಿಕಾರವು ಪದಾಧಿಕಾರಿಗಳನ್ನು ಹೊಂದಿದ್ದು, ಚಿಕ್ಕಮಗಳೂರು ಜಿಲ್ಲಾಧಿಕಾರಿ ಅಧ್ಯಕ್ಷರಾಗಿದ್ದಾರೆ. ಪೊಲೀಸ್ ಅಧೀಕ್ಷಕರು ಸದಸ್ಯ ಕಾರ್ಯದರ್ಶಿಯಾಗಿ ಮತ್ತು ನಾಗರೀಕ ಸಮಾಜದಿಂದ ನರೇಂದ್ರ ಪೈ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರವು ಡಿವೈಎಸ್‌ಪಿ ಮತ್ತು ಕೆಳಗಿನ ಹಂತದ ಪೊಲೀಸ್ ಅಧಿಕಾರಿ/ಸಿಬ್ಬಂದಿರವರ ಪೊಲೀಸ್ ಅಭಿರಕ್ಷೆಯಲ್ಲಿ ನಡೆದ ಸಾವು, ತೀವ್ರ ಸ್ವರೂಪದ ಗಾಯ ಅಥವಾ ಅತ್ಯಾಚಾರದ ದೂರಿನ ಬಗ್ಗೆ ವಿಚಾರಣೆ ಮಾಡಬಹುದಾಗಿದೆ. ಸಾರ್ವಜನಿಕರು ದೂರುಗಳನ್ನು ಜಿಲ್ಲಾಧಿಕಾರಿಗಳ ಕಛೇರಿಯ ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರದ ಅಧ್ಯಕ್ಷರ ದೂ.ಸಂ.08262-230401, ಜಿಲ್ಲಾ ಪೊಲೀಸ್ ಕಛೇರಿಯ ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ದೂ.ಸಂ.08262-230403 ಸಂಖ್ಯೆಗೆ ಸಂಪರ್ಕಿಸ ಬಹುದಾಗಿದೆ.
Kshetra Samachara
08/11/2024 05:47 pm