ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಹೊರತರಲು ಶಿಕ್ಷಕರು ಮುಂದಾಗಬೇಕು - ನಗರಸಭೆ ಸದಸ್ಯ ಗುರುಮಲ್ಲಪ್ಪ

ಚಿಕ್ಕಮಗಳೂರು : ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಹೊಸದಾದ ಜೀವನ ಕೌಶಲ್ಯವ ನ್ನು ಹೊಂದಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದ್ದು ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಹೊರತರಲು ಶಿಕ್ಷಕರು ಮುಂದಾಗಬೇಕು ಎಂದು ನಗರಸಭೆ ಸದಸ್ಯ

ಗುರುಮಲ್ಲಪ್ಪ ಹೇಳಿದರು.

ಜಿ.ಪಂ., ತಾ.ಪಂ. ಶಾಲಾ ಶಿಕ್ಷಣ ಇಲಾಖೆ, ನಗರಸಭೆ, ಸಮೂಹ ಸಂಪನ್ಮೂಲ ಕೇಂದ್ರ, ದಂಟರಮಕ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಶ್ರೀ ಗುರುಸಿದ್ಧರಾಮೇಶ್ವರ ದೇವಾಲಯದ ಆವರಣ ದಲ್ಲಿ ಶುಕ್ರವಾರ ನಗರ-3 ಕ್ಲಸ್ಟರ್

ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಗಳನ್ನು ಹೊರತರಲು ಶಿಕ್ಷಣ ಇಲಾಖೆಯು ರೂಪಿಸಿರುವ ಅತ್ಯುತ್ತಮ ಕಾರ್ಯಕ್ರಮಗಳಲ್ಲಿ ಪ್ರತಿಭಾ ಕಾರಂಜಿಯು ಒಂದು. ಶಾಲಾ ಹಂತದಿಂದ ಆರಂಭವಾಗುವ ಸ್ಪರ್ಧೆಗಳು ಕ್ಲಸ್ಟರ್, ತಾಲೂಕು, ಜಿಲ್ಲಾ, ರಾಜ್ಯ ಮಟ್ಟದವರೆಗೂ ನಡೆದು ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆಯನ್ನು ಒದಗಿಸುತ್ತವೆ ಎಂದು ಅಭಿಪ್ರಾಯಪಟ್ಟರು.

Edited By : PublicNext Desk
Kshetra Samachara

Kshetra Samachara

08/11/2024 06:37 pm

Cinque Terre

380

Cinque Terre

0

ಸಂಬಂಧಿತ ಸುದ್ದಿ